ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
NEW DELHI : ಐಎಸ್ಐಎಸ್ ಉಗ್ರ ಸಂಘಟನೆಯ ಶಂಕಿತ (Suspected) ಉಗ್ರ ಅರಾಫತ್ ಅಲಿ ಎಂಬಾತನನ್ನು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈತ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವನು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೀನ್ಯಾ ದೇಶದ ನೈರೋಬಿಯಿಂದ ಅರಾಫತ್ ಅಲಿ ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಶಂಕಿತ
ಅರಾಫತ್ ಅಲಿ 2020ರಿಂದ ತಲೆಮರೆಸಿಕೊಂಡಿದ್ದ. ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ. ಈ ಸಂಘಟನೆಯ ವಿಚಾರಧಾರೆಯನ್ನು ಭಾರತದಲ್ಲಿರುವ ಯುವಕರಿಗೆ ತಿಳಿಸಿ ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದ ಎಂದು ಎನ್ಐಎ ತಿಳಿಸಿದೆ. ಈತನ ಪ್ರೇರಣೆಯಿಂದಾಗಿಯೇ ತೀರ್ಥಹಳ್ಳಿಯ ಶಂಕಿತ ಮೊಹಮ್ಮದ್ ಶಾರೀಕ್ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ್ಕೆ ಮುಂದಾಗಿದ್ದ. ಆದರೆ ಮಾರ್ಗ ಮಧ್ಯೆ ಆಟೋದಲ್ಲಿಯೇ ಬಾಂಬ್ ಸ್ಪೋಟಗೊಂಡಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2020ರಲ್ಲಿ ಮಂಗಳೂರಿನಲ್ಲಿ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬ ಪರವಾಗಿ ಗೋಡೆ ಬರಹ ಪ್ರಕಟಿಸಲಾಗಿತ್ತು. ಶಂಕಿತರಾದ ಮೊಹಮ್ಮದ್ ಶಾರೀಕ್ ಮತ್ತು ಮಾಜ್ ಮುನೀರ್ ಈ ಪ್ರಕರಣದ ಆರೋಪಿಗಳು. ಇವರಿಬ್ಬರಿಗು ಅರಾಫತ್ ಅಲಿ ಪ್ರೇರಣೆ ನೀಡಿದ್ದ ಎಂಬ ಆರೋಪವು ಇದೆ. ಈ ಹಿನ್ನೆಲೆ ಶಂಕಿತ ಅರಾಫತ್ ಅಲಿಯನ್ನು ಬಂಧಿಸಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.