SHIMOGA | ಪ್ರೀತಿಸಿ ಮದುವೆಯಾಗಿದ್ದ ಆಯನೂರಿನ ಯುವತಿ, ಗಾಡಿಕೊಪ್ಪದಲ್ಲಿ ಅನುಮಾನಾಸ್ಪದ ಸಾವು, ಗಂಡ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021

ಗಾಡಿಕೊಪ್ಪದ ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿತ್ತು. ಆದರೆ ಇದು ವರದಕ್ಷಿಣೆಗಾಗಿ ನಡೆದ ಕೊಲೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.

ವರ್ಷದ ಹಿಂದೆ ಪ್ರೀತಿಸಿ ಮದುವೆ

ಮೋನಿಕಾ (20) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಆಯನೂರು ತಾಂಡಾದ ಶಂಕರ ನಾಯ್ಕ್  ಅವರ ಪುತ್ರಿ ಮೋನಿಕಾ, ಗಾಡಿಕೊಪ್ಪದ ಚಂದನ್‍ ಎಂಬಾತನನ್ನು ಪ್ರೀತಿಸಿದ್ದಳು. ವರ್ಷದ ಹಿಂದೆ ಮದುವೆಯಾಗಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಮೂರ್ನಾಲ್ಕು ತಿಂಗಳ ಬಳಿಕ ಚಂದನ್ ಮತ್ತು ಆತನ ಕುಟುಂಬದವರು ವರದಕ್ಷಿಣೆಗಾಗಿ ಕಿರುಕುಳ ಆರಂಭಿಸಿದರು ಎಂದು ಮೋನಿಕಾಳ ಪೋಷಕರು ಆರೋಪಿಸಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಗಾಡಿಕೊಪ್ಪದಲ್ಲಿರುವ ಚಂದನ್ ಮನೆಯಲ್ಲಿ ಮೋನಿಕಾಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ ಚಂದನ್ ಕೊಲೆ ಮಾಡಿ, ಮೋನಿಕಾಳ ಕುತ್ತಿಗೆಗೆ ನೇಣು ಬಿಗಿದಿರುವ ಬಗ್ಗೆ ಆಕೆಯ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ. ಮಗಳು ಮೃತಪಟ್ಟಿರುವುದಾಗಿ ಚಂದನ್, ಮೋನಿಕಾಳ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಅವರು ಬರುವ ಮೊದಲೆ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೋನಿಕಾಳ ಸಾವಿನ ಕುರಿತು ಆಕೆಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಚಂದನ್‍ನನ್ನು ವಶಕ್ಕೆ ಪಡೆಯಲಾಗಿದೆ. ಚಂದನ್ ಪೋಷಕರು, ಅಕ್ಕ, ಭಾವನ ವಿರುದ್ಧ ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 11, 2021

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment