ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಗಾಡಿಕೊಪ್ಪದ ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿತ್ತು. ಆದರೆ ಇದು ವರದಕ್ಷಿಣೆಗಾಗಿ ನಡೆದ ಕೊಲೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವರ್ಷದ ಹಿಂದೆ ಪ್ರೀತಿಸಿ ಮದುವೆ
ಮೋನಿಕಾ (20) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಆಯನೂರು ತಾಂಡಾದ ಶಂಕರ ನಾಯ್ಕ್ ಅವರ ಪುತ್ರಿ ಮೋನಿಕಾ, ಗಾಡಿಕೊಪ್ಪದ ಚಂದನ್ ಎಂಬಾತನನ್ನು ಪ್ರೀತಿಸಿದ್ದಳು. ವರ್ಷದ ಹಿಂದೆ ಮದುವೆಯಾಗಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಮೂರ್ನಾಲ್ಕು ತಿಂಗಳ ಬಳಿಕ ಚಂದನ್ ಮತ್ತು ಆತನ ಕುಟುಂಬದವರು ವರದಕ್ಷಿಣೆಗಾಗಿ ಕಿರುಕುಳ ಆರಂಭಿಸಿದರು ಎಂದು ಮೋನಿಕಾಳ ಪೋಷಕರು ಆರೋಪಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಗಾಡಿಕೊಪ್ಪದಲ್ಲಿರುವ ಚಂದನ್ ಮನೆಯಲ್ಲಿ ಮೋನಿಕಾಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ ಚಂದನ್ ಕೊಲೆ ಮಾಡಿ, ಮೋನಿಕಾಳ ಕುತ್ತಿಗೆಗೆ ನೇಣು ಬಿಗಿದಿರುವ ಬಗ್ಗೆ ಆಕೆಯ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ. ಮಗಳು ಮೃತಪಟ್ಟಿರುವುದಾಗಿ ಚಂದನ್, ಮೋನಿಕಾಳ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಅವರು ಬರುವ ಮೊದಲೆ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಮೋನಿಕಾಳ ಸಾವಿನ ಕುರಿತು ಆಕೆಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಚಂದನ್‍ನನ್ನು ವಶಕ್ಕೆ ಪಡೆಯಲಾಗಿದೆ. ಚಂದನ್ ಪೋಷಕರು, ಅಕ್ಕ, ಭಾವನ ವಿರುದ್ಧ ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]