ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 12 AUGUST 2024 : ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಅನುಮಾನಾಸ್ಪದ (Suspicious) ವಸ್ತುಗಳು ಪತ್ತೆಯಾಗಿದೆ. ಈ ಸಂಬಂಧ ಜೈಲು ಸಿಬ್ಬಂದಿ ದೂರು ನೀಡಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸೋಗಾನೆಯಲ್ಲಿರುವ ಕಾರಾಗೃಹದ ಶರಾವತಿ ವಿಭಾಗದ ಬಳಿ ಹಸಿರು ಹುಲ್ಲು ಸುತ್ತಿದ ರೀತಿಯಲ್ಲಿ ವಸ್ತು ಪತ್ತೆಯಾಗಿದೆ. ಮತ್ತೊಂದು ಕಡೆ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿ ಮತ್ತೊಂದು ವಸ್ತು ಪತ್ತೆಯಾಗಿದೆ. ಇದನ್ನು ಪರಿಶೀಲಿಸಿದ ಕಾರಾಗೃಹ ಸಿಬ್ಬಂದಿ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಕಾರಾಗೃಹ ಸಮೀಪಕ್ಕೆ ಬಂದು ಅನುಮಾನಾಸ್ಪದ ವಸ್ತುಗಳನ್ನು ಹೊರಗಿನಿಂದ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ ⇒ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್ ಪತ್ತೆ, ರೆಕಾರ್ಡ್ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್