ತೀರ್ಥಹಳ್ಳಿ ಬಳಿ ಅಪಘಾತ, ತರೀಕೆರೆಯ ಇಬ್ಬರಿಗೆ ಗಾಯ, ಚಿಕಿತ್ಸೆಗಾಗಿ ಒಬ್ಬಾತ ಬೆಂಗಳೂರಿಗೆ ಶಿಫ್ಟ್‌, ಹೇಗಾಯ್ತು ಘಟನೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 30 APRIL 2024

THIRTHAHALLI : ಮುಡುಬದಲ್ಲಿ ಕಾಲು ನೋವಿಗೆ ನಾಟಿ ಔಷಧಿ ಪಡೆದು, ಶೃಂಗೇರಿಗೆ ತೆರಳುತ್ತಿದ್ದಾಗ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು, ತರೀಕೆರೆಯ ಇಬ್ಬರು ಬೈಕ್‌ ಸವಾರರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ತುಡುಕಿ ಬಳಿ ಘಟನೆ ಸಂಭವಿಸಿದೆ.

ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಗೂಡ್ಸ್‌ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತರೀಕೆರೆಯ ಮಣಿಕಂಠ ಮತ್ತು ಯೋಗೇಶ್‌ ಎಂಬುವವರು ಗಾಯಗೊಂಡಿದ್ದಾರೆ. ಅಪಘಾತಪಡಿಸಿದ ಗೂಡ್ಸ್‌ ವಾಹನ ಸ್ಥಳದಲ್ಲಿ ನಿಲ್ಲದೆ ತೆರಳಿದೆ ಎಂದು ಆರೋಪಿಸಲಾಗಿದೆ.

ಗಾಯಾಳುಗಳಿಗೆ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯೋಗೇಶ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಕಸ ಬಿಸಾಡಲು ಮನೆಯಿಂದ ಹೊರ ಬಂದ ಮಹಿಳೆ ಸಾವು, ಹೆದ್ದಾರಿ ಮೇಲಿತ್ತು ಮೃತದೇಹ, ಆಗಿದ್ದೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment