ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
CRIME NEWS, 22 AUGUST 2024 | ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಶಿಕ್ಷಕನನ್ನು (Teacher) ಪೊಲೀಸರು ಬಂಧಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
45 ವರ್ಷದ ಆರೋಪಿ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ. 21 ವಿದ್ಯಾರ್ಥಿನಿಯರ ಪೈಕಿ 5 ವಿದ್ಯಾರ್ಥಿನಿಯರು ಈ ಕುರಿತು ಶಾಲೆಯ ಪ್ರಾಚಾರ್ಯರಿಗೆ ತಿಳಿಸಿದ್ದರು. ಈ ಸಂಬಂಧ ಪ್ರಾಚಾರ್ಯರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣ ಪೋಕ್ಸೊ ಕಾಯ್ದೆ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಶಿಕ್ಷಕನ ಕೃತ್ಯಕ್ಕೆ ಉಳಿದ ವಿದ್ಯಾರ್ಥಿನಿಯರು ತಾವು ಸಾಕ್ಷಿ ಎಂದು ಹೇಳುತ್ತಿದ್ದಾರೆ. ಸದ್ಯ ವಿದ್ಯಾರ್ಥಿನಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವಿದ್ಯಾರ್ಥಿನಿಯರನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ ⇒ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರನ ಹತ್ಯೆಗೆ ಸಂಚು, ದಾಖಲಾಯ್ತು ಕೇಸ್
ಇನ್ನು, ಯಾವುದೇ ಶಾಲೆಯಲ್ಲಿ ಲೈಂಗಿಕ ಕಿರುಕುಳ ಉಂಟಾದರೆ ಕೂಡಲೆ 1098 ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೆ ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಬಹುದಾಗಿದೆ. (ಅಪ್ರಾಪ್ತರು ಮತ್ತು ಲೈಂಗಿಕ ದೌರ್ಜನ್ಯದ ಸುದ್ದಿಗಳಲ್ಲಿ ಹೆಸರು, ವಿಳಾಸ ಸೇರಿ ಸಂತ್ರಸ್ತರ ಗುರುತು ಸಿಗುವಂತಹ ಯಾವುದೇ ಮಾಹಿತಿ ಪ್ರಕಟಿಸುವಂತಿಲ್ಲ.)