ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಆಗಸ್ಟ್ 2021
ಶಿವಮೊಗ್ಗ ವಿನೋಬನಗರದಲ್ಲಿ ಸ್ಮಾರ್ಟ್ಸಿಟಿ ಅವ್ಯವಸ್ಥೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರ, ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ, ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಂಗನಾಥ(47) ಮೃತರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೈಕ್ ಮತ್ತು ಲಾರಿ ನಡುವೆ ಅಪಘಾತದಲ್ಲಿ ಶಿಕ್ಷಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಎಂದಿನಂತೆ ರಂಗನಾಥ ಅವರು ಮನೆಯಿಂದ ಶಾಲೆಗೆ ಬೈಕ್ನಲ್ಲಿ ತೆರಳುತಿದ್ದರು. ಈ ವೇಳೆ 100 ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಉಷಾ ನರ್ಸಿಂಗ್ ಹೋಮ್ ಕಡೆ ತೆರಳುತ್ತಿದ್ದ ಲಾರಿ ಹಿಂಬದಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ.
ವಿನೋಬನಗರದಲ್ಲಿ ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಕುಂಟುತ್ತಾ ಸಾಗಿದೆ. ಸ್ಮಾರ್ಟ್ಸಿಟಿ ಯೋಜನೆಯಡಿ ರಸ್ತೆ ಕಾಮಗಾರಿ ನಡೆದಿದೆ. ಹಾಗಾಗಿ ಒಂದೇ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಪ್ರತಿನಿತ್ಯ ಹತ್ತಾರು ಅಪಘಾತಗಳು ನಡೆಯುತ್ತಿವೆ ಎಂದು ಸ್ಥಳೀಯರು ಕಾಮಗಾರಿ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು ಘಟನಾ ಸ್ಥಳಕ್ಕೆ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಮದರಿಪಾಳ್ಯದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200