ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಬೈಕ್ ಡಿಕ್ಕಿ, ಜಾವಳ್ಳಿ ಅರಬಿಂದೋ ಶಾಲೆ ಶಿಕ್ಷಕ ಸಾವು

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ  ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ರಸ್ತೆ ದಾಟುತ್ತಿದ್ದಾಗ ಅವಘಡ  ಸಂಭವಿಸಿದೆ.

ಜಾವಳ್ಳಿ ಅರಬಿಂದೋ ಶಾಲೆಯ ಶಿಕ್ಷಕ ರಾಜೀವ್ (38) ಮೃತರು. ಇವರ ಮಗ ವತ್ಸ (6) ಗಾಯಗೊಂಡಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೇಗಾಯ್ತು ಘಟನೆ?

ADVT JULY NANJAPPA HOSPITAL HOME LAB TESTING

ಮಗನೊಂದಿಗೆ ಮೈಸೂರಿನಿಂದ ಹಿಂತಿರುಗುತ್ತಿದ್ದ ರಾಜೀವ್ ಅವರು, ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಬಸ್ಸಿನಿಂದ ಇಳಿದುಕೊಂಡಿದ್ದಾರೆ. ನಂಜಪ್ಪ ಲೇಔಟ್’ನಲ್ಲಿರುವ ಮನೆಗೆ ತೆರಳಬೇಕಿತ್ತು. ಈ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ರಾಜೀವ್ ಅವರು ಸಾವನ್ನಪ್ಪಿದ್ದಾರೆ.

ಪಶ್ಚಿಮ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡಸುತ್ತಿದ್ದಾರೆ.

1632381434119645 4

0001

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY, CRIME DIARY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 27, 2021

Leave a Comment