ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಜನವರಿ 2022
ಶಿಕ್ಷಕಿಯೊಬ್ಬರ ಮನೆ ಬಾಗಿಲ ಚಿಲಕ ಮುರಿದು ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಶಿಕ್ಷಕಿಯು ಶಾಲೆಗೆ ತೆರಳಿದ್ದ ಸಂದರ್ಭ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಮಿಳಘಟ್ಟದ ನಿವಾಸಿ ರೇಖಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ರೇಖಾ ಅವರು ತೀರ್ಥಹಳ್ಳಿಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಅವರು ಶಾಲೆಗೆ ತೆರಳಿದ್ದ ಸಂದರ್ಭ ಕಳ್ಳರು ಮನೆಯ ಚಿಲಕ ಮುರಿದು ಕಳ್ಳತನ ಮಾಡಿದ್ದಾರೆ.
ಕಬೋರ್ಡ್’ನಲ್ಲಿದ್ದ ಪರ್ಸನ್ನು ಕಳ್ಳರು ಕದ್ದೊಯ್ದಿದ್ದಾರೆ. ಅದರಲ್ಲಿ ಸುಮಾರು 70 ಸಾವಿರ ಬೆಲೆ ಬಾಳುವ ಚಿನ್ನಾಭರಣ, ಐದು ಸಾವಿರ ರೂ. ನಗದು ಇತ್ತು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.