ಶಿವಮೊಗ್ಗ: ‘ನಿಮ್ಮ ರೀಲ್ಸ್‌ನ ಅಭಿಮಾನಿಗಳು’ ಎಂದು ತಿಳಿಸಿ ಟೀಚರ್ (Teacher) ಒಬ್ಬರನ್ನು ದರೋಡೆ ಮಾಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಕೃತ್ಯ ನಡೆದಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಖಾಸಗಿ ಶಾಲೆಯೊಂದರ ಶಿಕ್ಷಕ (ಹೆಸರು ಗೌಪ್ಯ) ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ಇನ್‌ಸ್ಟಾಗ್ರಾಂಗೆ ವ್ಯಕ್ತಿಯೊಬ್ಬ ಮೆಸೇಜ್ ಮಾಡಿದ್ದ. ಶಿಕ್ಷಕನ ರೀಲ್ಸ್‌ಗೆ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದ. ಕೊನೆಗೆ ಶಿಕ್ಷಕನನ್ನು ಭೇಟಿಯಾಗಬೇಕು ಎಂದು ತಿಳಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನ.7ರ ರಾತ್ರಿ 9.30ಕ್ಕೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಶಿಕ್ಷಕ ತನ್ನ ಬೈಕಿನಲ್ಲಿ ತೆರಳಿದ್ದರು. ಓಮ್ನಿ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ‘ನಾನೇ ನಿಮಗೆ ಮೆಸೇಜ್ ಮಾಡಿದ್ದುʼ ಎಂದು ತಿಳಿಸಿದ್ದ. ಕಾರಿನಿಂದ ಇಳಿದ ಮೂವರು ಶಿಕ್ಷಕನನ್ನು ಸುತ್ತುವರೆದು ಚಾಕು ತೋರಿಸಿ ಬೆದರಿಸಿದ್ದರು. ಶಿಕ್ಷಕನ ಉಂಗುರಗಳು, ಕೊರಳಲ್ಲಿದ್ದ ಚಿನ್ನದ ಸರ, ಕಿವಿಯೋಲೆ, ಮೊಬೈಲ್ ಫೋನ್ ಕಸಿದುಕೊಂಡು ಹೋಗಿದ್ದಾರೆ. ಅಲ್ಲದೆ ಶಿಕ್ಷಕನ ಫೋನ್ ಪೇಯಿಂದ ₹3500 ನಗದು ವರ್ಗಾಯಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಡಿಪಿಗೆ ಸಾವರ್ಕರ್ ಫೋಟೊ ಬಳಸಿದ್ದಕ್ಕೆ ವಾಟ್ಸಪ್ ಕರೆ ಮಾಡಿ ಜೀವ ಬೆದರಿಕೆ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





