ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SORABA NEWS, 2 OCTOBER 2024 : ರಸ್ತೆಯಲ್ಲಿ ಹಾವು (Snake) ಅಡ್ಡ ಬಂತು ಅಂತಾ ಬೈಕ್ ನಿಲ್ಲಿಸಿಕೊಂಡು ಪಕ್ಕದಲ್ಲಿ ನಿಂತಿದ್ದ ಶಿಕ್ಷಕರೊಬ್ಬರಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ. ಸೊರಬ ತಾಲೂಕಿನ ಸೊರಬ – ಜಂಗಿನಕೊಪ್ಪ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕೆಲಸ ಮುಗಿಸಿ ಶಿಕ್ಷಕ ನಟರಾಜ್ ಕುಬಟೂರು ಅವರು ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು. ರಸ್ತೆಯಲ್ಲಿ ಹಾವು ಬಂದಿದ್ದರಿಂದ ಬೈಕ್ ನಿಲ್ಲಿಸಿ, ಹಿಂಬದಿಗೆ ಬಂದು ನಿಂತಿದ್ದರು. ಈ ವೇಳೆ ಸೊರಬ ಕಡೆಯಿಂದ ವೇಗವಾಗಿ ಬಂದ ಸ್ಪ್ಲೆಂಡರ್ ಬೈಕ್, ಶಿಕ್ಷಕ ನಟರಾಜ್ ಅವರಿಗೆ ಡಿಕ್ಕಿ ಹೊಡೆದಿದೆ. ಕಾಲಿಗೆ ಗಂಭೀರ ಗಾಯವಾಗಿದ್ದು, ಭುಜ, ಮೂಗು ಸೇರಿದಂತೆ ವಿವಿಧೆಡೆ ಗಾಯವಾಗಿತ್ತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿಕ್ಷಕ ನಟರಾಜ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್ ಸಂಗ್ರಹ