ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ದೇವಸ್ಥಾನದ (Temple) ಬಾಗಿಲನ್ನು ಮೀಟಿ ತೆಗೆದು ಹುಂಡಿ ಒಡೆದು ಕಾಣಿಕೆ ಹಣ ಕಳವು ಮಾಡಲಾಗಿದೆ. ಶಿವಮೊಗ್ಗ ತಾಲೂಕು ಆಲದಹಳ್ಳಿ ಶ್ರೀ ವೀರಭದ್ರೇಶ್ವರ ಮತ್ತು ಹಾಲಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅರ್ಚಕರು ಬೆಳಗ್ಗೆ ಪೂಜೆಗೆಂದು ದೇಗುಲಕ್ಕೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಹುಂಡಿ ಒಡೆದು ಸುಮಾರು 7500 ರೂ. ಕಾಣಿಕ ಹಣ, ದೇವರ ಕೊರಳಿನ 3 ಬೆಳ್ಳಿಯ ಕರಡಿಗೆ, ದೇವರ ಚಿನ್ನದ ತಾಳಿ, ಚಿನ್ನದ ಗುಂಡುಗಳು, 2 ಸಿಸಿ ಕ್ಯಾಮರಾಗಳನ್ನು ಕದೊಯ್ದಿದ್ದಾರೆ.
ಜೂ.18ರಂದು ಘಟನೆ ಸಂಭವಿಸಿದೆ. ದೇವಸ್ಥಾನದ ಕಮಿಟಿಯವರು ಸಭೆ ನಡೆಸಿ ತೀರ್ಮಾನ ತೆಗೆದುಕೊಂಡ ಬಳಿಕ ದೂರು ನೀಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಇವತ್ತು ಭಾರಿ ಮಳೆ ಸಾಧ್ಯತೆ, ಎಷ್ಟಿರುತ್ತೆ ಇವತ್ತಿನ ತಾಪಮಾನ?