ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021
ನಡುರಾತ್ರಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಕಳ್ಳರನ್ನು ಹಿಡಿಯಲು ಮುಂದಾದ ಸಾರ್ವಜನಿಕರಿಗೆ ಚಾಕು ತೋರಿಸಿ ಕಳ್ಳರು ಪರಾರಿಯಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಹೊಳೆಬೆನವಳ್ಳಿ ಗ್ರಾಮದಲ್ಲಿ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಒಡೆದು ಮದ್ಯರಾತ್ರಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಜೋರು ಶಬ್ದ, ಗಂಟು ಕಟ್ಟಿ ಓಡಿದ ಕಳ್ಳರು
ನಡುರಾತ್ರಿ ಜೋರು ಶಬ್ದವಾಗಿದ್ದರಿಂದ ದೇವಸ್ಥಾನದ ಸಮೀಪದ ಮನೆಯಲ್ಲಿದ್ದವರು ಎಚ್ಚರವಾಗಿದ್ದಾರೆ. ದೇವಸ್ಥಾನದ ಕಡೆಗೆ ನೋಡಿದಾಗ ಒಳಗಿಂದ ಇಬ್ಬರು ಓಡುತ್ತಿರುವುದು ಗಮನಕ್ಕೆ ಬಂದಿದೆ. ಒಬ್ಬನ ಕೈಯಲ್ಲಿ ಬಟ್ಟೆಯಿಂದ ಕಟ್ಟಿಕೊಂಡಿದ್ದ ಗಂಟು ಇರುವುದನ್ನ ಗಮನಿಸಿದ್ದಾರೆ. ಕಳ್ಳರನ್ನು ಹಿಂಬಾಲಿಸಲು ಮುಂದಾದಾಗ ಚಾಕು ತೋರಿಸಿ ಬೆದರಿಸಿದ್ದಾರೆ.
ದೇವರ ಆಭರಣಗಳನ್ನು ಕದ್ದೊಯ್ದರು
ಕಳ್ಳರು ನಾಲ್ಕು ಗ್ರಾಂ ತೂಕದ ದೇವರ ಬಂಗಾರದ ತಾಳಿ, 120 ಗ್ರಾಂ ತೂಕದ ಮೂರು ಬೆಳ್ಳಿಯ ಮುಖವಾಡಗಳು, ದೇವರ ಹುಂಡಿಯಲ್ಲಿದ್ದ ಸುಮಾರು 10 ಸಾವಿರ ರೂ.ಕಾಣಿಕೆ ಕದ್ದೊಯ್ದಿದ್ದಾರೆ. ಸುಮಾರು 35 ಸಾವಿರ ಮೌಲ್ಯದ ಚಿನ್ನಾಭರಣ, ಹಣ ಕಳವಾಗಿದೆ ಎಂದು ದೇವಸ್ಥಾನ ಸಮಿತಿ ದೂರಿನಲ್ಲಿ ತಿಳಿಸಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200