ಭದ್ರಾವತಿಯ ವ್ಯಕ್ತಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹61,000 ದಂಡ, ಏನಿದು ಪ್ರಕರಣ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 21 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹61,000 ದಂಡ ವಿಧಿಸಿ ಆದೇಶಿಸಿದೆ. 

2023ರಲ್ಲಿ ಬಾಲಕಿಯ ಮೇಲೆ ದೌರ್ಜನ್ಯ ನಡೆದಿತ್ತು. ಈ ಬಗ್ಗೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. 

ಇದನ್ನೂ ಓದಿ » ಶಿವಮೊಗ್ಗದ ರೈತನಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?

ಪ್ರಕರಣದ ತನಿಖೆ ನಡೆಸಿದ್ದ ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀಧರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಕೀಲ ಶ್ರೀಧರ್ ವಾದ ಮಂಡಿಸಿದ್ದರು. ವಿಚಾರಣೆ ವೇಳೆ ಆರೋಪ ದೃಢಪಟ್ಟಿದ್ದರಿಂದ ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment