ಶಿವಮೊಗ್ಗ ಲೈವ್
ಶಿವಮೊಗ್ಗ: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 21 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹61,000 ದಂಡ ವಿಧಿಸಿ ಆದೇಶಿಸಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
2023ರಲ್ಲಿ ಬಾಲಕಿಯ ಮೇಲೆ ದೌರ್ಜನ್ಯ ನಡೆದಿತ್ತು. ಈ ಬಗ್ಗೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಇದನ್ನೂ ಓದಿ » ಶಿವಮೊಗ್ಗದ ರೈತನಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಪ್ರಕರಣದ ತನಿಖೆ ನಡೆಸಿದ್ದ ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀಧರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಕೀಲ ಶ್ರೀಧರ್ ವಾದ ಮಂಡಿಸಿದ್ದರು. ವಿಚಾರಣೆ ವೇಳೆ ಆರೋಪ ದೃಢಪಟ್ಟಿದ್ದರಿಂದ ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
