ಚಿನ್ನಿಕಟ್ಟೆ ಬಳಿ ಅಪಘಾತ, ಕಾರು ನಜ್ಜುಗುಜ್ಜು, ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JULY 2024

SAVALANGA : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾಗಿ ಕ್ರೈಸ್ತ ಧರ್ಮಗುರು (Priest) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸವಳಂಗ ಸಮೀಪದ ಚಿನ್ನಿಕಟ್ಟೆ ಬಳಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ.

ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿದೆ. ಕಾರಿನಲ್ಲಿದ್ದ  ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನ್ಯಾಮತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

The-priest-succumbed-at-Chinnikatte-ksrtc-bus-car-incident.

ಇದನ್ನೂ ಓದಿ ⇓

ಹೊಸನಗರದಲ್ಲಿ ಕಡಿಮೆಯಾದ ಮಳೆ, ಚಕ್ರಾ, ಸಾವೇಹಕ್ಲುವಿನಿಂದ ಎಷ್ಟಿದೆ ಹೊರ ಹರಿವು?‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment