ಶಿವಮೊಗ್ಗ ಲೈವ್.ಕಾಂ | ಕುಂಸಿ | 16 ಜುಲೈ 2019
ಹೊಟೇಲ್ ಮಾಲೀಕರೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನದ ಆಭರಣ, ಗೃಹೋಪಯೋಗಿ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹಾರನಹಳ್ಳಿಯಲ್ಲಿರುವ ನಾಗರಾಜ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗರಾಜ್, ಹೆಂಡಿತ, ಮಕ್ಕಳ ಜೊತೆಗೆ ಆಯನೂರಿನಲ್ಲಿರುವ ತಮ್ಮ ಹೊಟೇಲ್’ಗೆ ತೆರಳಿದ್ದ ವೇಳೆ, ಕಳ್ಳರು ಕೈಚಳಕ ತೋರಿಸಿದ್ದಾರೆ.
ಮನೆಯ ಕರೆಂಟ್ ಕಟ್ ಮಾಡಿ, ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು, 23,500 ರೂ. ಮೌಲ್ಯದ ಚಿನ್ನದ ಆಭರಣಗಳು, ಇತರೆ ಗೃಹೋಪಯೋಗಿ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಕುಂಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]