ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | AYANUR NEWS | 7 ಸೆಪ್ಟೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಂಗಡಿಯೊಂದರ ಬಾಗಿಲು ಮುರಿದು ಒಳ ನಗ್ಗಿದ ಕಳ್ಳರು ಹಣಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆಯನೂರಿನ ಬಿ.ಹೆಚ್.ರಸ್ತೆಯಲ್ಲಿರುವ ಭರತ್ ರಾಜ್ ಅವರಿಗೆ ಸೇರಿದ ಸಿದ್ಧೇಶ್ವರ ಪ್ರಾವಿಜನ್ ಸ್ಟೋರ್’ನಲ್ಲಿ ಕಳ್ಳತನವಾಗಿದೆ. ಅಂಗಡಿಯ ರೋಲಿಂಗ್ ಶೆಟರ್ ಮುರಿದು ಖದೀಮರು ಕೈಚಳಕ ತೋರಿಸಿದ್ದಾರೆ.
ಗುಟ್ಕಾ, ಸಿಗರೇಟ್ ಕಳವು
ಖದೀಮರು ಅಂಗಡಿಯಲ್ಲಿ ಸುಮಾರು 5 ಸಾವಿರ ರೂ. ನಗದು ಕದ್ದಿದಾರೆ. ಆದರೆ ಇದಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕಳವು ಮಾಡಿದ್ದಾರೆ. ಹತ್ತು ಬಾಕ್ಸ್ RMD, ಎರಡು ಬ್ಯಾಗ್ ವಿಮಲ್, ಎರಡು ಬ್ಯಾಗ್ ಮಧು, ಎರಡು ಬ್ಯಾಗ್ ಸ್ಟಾರ್ ಗುಟ್ಕಾ, ನಾಲ್ಕು ಬಂಡಲ್ ಸಿಗರೇಟ್ ಕದ್ದೊಯ್ದಿದ್ದಾರೆ.
ಒಟ್ಟು ಸಮಾರು 75 ಮೌಲ್ಯದ ವಸ್ತುಗಳು ಮತ್ತು ನಗದು ಕಳ್ಳತನವಾಗಿದೆ ಎಂದು ಭರತ್ ರಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕುಂಸಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200