ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್ನಲ್ಲಿರುವ ಶ್ರೀ ಸಿದ್ದಿ ಬುದ್ದಿ ಮಹಾಗಣಪತಿ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವರ ಬೆಳ್ಳಿಯ ಮುಖವಾಡ ಮತ್ತು ಹುಂಡಿಯಲ್ಲಿದ್ದ ಕಾಣಿಕೆ ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ.
ದೀಪೋತ್ಸವ ಮುಗಿದ ರಾತ್ರಿಯೆ ಕಳ್ಳತನ
ಕಾರ್ತಿಕ ದೀಪೋತ್ಸವದ ಪೂಜೆ ಮುಗಿಸಿ ದೇವಸ್ಥಾನದ ಬಾಗಿಲುಗಳನ್ನು ಹಾಕಿಕೊಂಡು ಹೋದ ನಂತರ ಕೃತ್ಯ ನಡೆದಿದೆ. ಮರುದಿನ ಬೆಳಗ್ಗೆ 6 ಗಂಟೆಗೆ ಅರ್ಚಕರು ಬಂದು ನೋಡಿದಾಗ ಶ್ರೀ ಚೌಡೇಶ್ವರಿ ದೇವಸ್ಥಾನದ ಮುಖ್ಯ ಬಾಗಿಲು ಒಡೆದಿದ್ದು ಕಂಡುಬಂದಿದೆ. ಗರ್ಭಗುಡಿಯಲ್ಲಿ ವಿಗ್ರಹದ ಆಭರಣ, 400 ಗ್ರಾಂ ತೂಕದ ಒಂದು ಬೆಳ್ಳಿಯ ಮುಖವಾಡ, 300 ಗ್ರಾಂ ತೂಕದ ಬೆಳ್ಳಿ ಲೇಪಿತ ಮತ್ತೊಂದು ಮುಖವಾಡ, ಕಾಣಿಕೆ ಹುಂಡಿಯಲ್ಲಿದ್ದ ಸುಮಾರು ₹6,000 ನಗದು ಸೇರಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಘಟನೆ ಸಂಬಂಧ ದೇವಸ್ಥಾನದ ಆಡಳಿತ ಸಮಿತಿಯು ತುಂಗಾ ನಗರ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






