ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಆಗಸ್ಟ್ 2021
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಚಿನ್ನಾಭರಣ ಮತ್ತು ಹಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ.
ಹಾಡೋನಹಳ್ಳಿಯ ಮಂಜುಳಾ ಎಂಬುವವರು ತಮ್ಮ ಸಹೋದರಿಯ ಮನೆಗೆ ತೆರಳಿದ್ದರು. ಈ ವೇಳೆ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ.
ಮನೆಯ ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಜುಮುಕಿ, ಬಟನ್ಸ್, ಕಾಲುಚೈನ್, ಬೆಳ್ಳಿಯ ಗುಂಡು, ಅರಿಶಿಣ ಕುಂಕುಮದ ಬೆಳ್ಳಿ ಬಟ್ಟಲು, ಐದು ಸಾವಿರ ರೂ. ನಗದು ಸೇರಿದಂತೆ ಹಲವು ವಸ್ತುಗಳ ಕಳ್ಳತನವಾಗಿದೆ.
ಒಟ್ಟು 50 ಸಾವಿರ ರೂ. ಮೌಲ್ಯದ ವಸ್ತುಗಳು, ನಗದು ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422