ಹಣಗೆರೆ ಬಳಿ ಬಾಗಿಲು ಮೀಟಿದ ಕಳ್ಳರು, ಮಹಾಲಯ ಅಮಾವಾಸ್ಯೆ ಪೂಜೆಗೆ ಹೋಗಿದ್ದವರ ಮನೆಯಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 28 ಸೆಪ್ಟೆಂಬರ್ 2021

ಮಹಾಲಯ ಅಮಾವಾಸ್ಯೆ ಪೂಜೆಗೆ ತೆರಳಿದ್ದ ಸಂದರ್ಭ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಹಣಗೆರೆ ಸಮೀಪ ಘಟನೆ ಸಂಭವಿಸಿದೆ. ಬೇಸೂರು ಶ್ರೀನಿವಾಸ್ ಅವರ ಮನೆಯಲ್ಲಿ ಕಳ್ಳತನವಾಗಿದೆ.

ಇಂಟರ್ ಲಾಕ್ ಮುರಿದ ಖದೀಮರು

ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು, ಬಾಗಿಲಿನ ಇಂಟರ್ ಲಾಕ್ ಮೀಟಿ ಒಳಗೆ ನುಗ್ಗಿದ್ದಾರೆ. ರೂಮಿನ ಬೀರುವಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿಸಿದ್ದಾರೆ.

ADVT JULY NANJAPPA HOSPITAL HOME LAB TESTING

ಮಹಾಲಯ ಅಮಾವಾಸ್ಯೆ ಪೂಜೆ

ಶ್ರೀನಿವಾಸ್ ಅವರು ತಮ್ಮ ಪತ್ನಿ, ಮಗ, ಸೊಸೆ ಜೊತೆಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳಿದ್ದರು. ಅಲ್ಲಿ ಮಹಾಲಯ ಅಮಾವಾಸ್ಯೆ ಪೂಜೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಳ್ಳತನವಾಗಿದೆ.

ಶ್ವಾನದಳ, ಬೆರಳಚ್ಚು ತಜ್ಞರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳ್ಳತ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

1632381453891714 0

0001

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment