ನಡುರಾತ್ರಿ ಮನೆಗೆ ಬಂದ ಕುಟುಂಬ, ಕೊಠಡಿಯಲ್ಲಿ ಅಡ್ಡಡ್ಡ ಬಿದ್ದಿತ್ತು ಬೀರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SORABA NEWS, 22 SEPTEMBER 2024 : ಕುಟುಂಬದವರೆಲ್ಲ ಈದ್‌ ಮಿಲಾದ್‌ ಮೆರವಣಿಗೆ ನೋಡಲು ತೆರಳಿದ್ದಾಗ ಮನೆಯ ಬಾಗಿಲಿನ ಚಿಲಕ ಮುರಿದು ಕಳ್ಳತನ ಮಾಡಲಾಗಿದೆ. ಕೊಠಡಿಯಲ್ಲಿದ್ದ (ROOM) ಬೀರುವನ್ನು ಅಡ್ಡಲಾಗಿ ಬೀಳಿಸಿ, ಬಾಗಿಲನ್ನು ಮೀಟಿ ತೆಗೆದು ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.

ಸೊರಬ ತಾಲೂಕು ಆನವಟ್ಟಿ ಸಮೀಪದ ತಲಗಡ್ಡೆ ಗ್ರಾಮದ ಮೊಹಮದ್‌ ಸಾದಿಕ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿದ್ದ 70 ಸಾವಿರ ರೂ. ನಗದು, ಚಿನ್ನದ ಸರ, ಉಂಗುರುಗಳು ಸೇರಿ 75 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ತಲಗಡ್ಡೆಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ಮುಗಿಸಿ ರಾತ್ರಿ 3.30ರ ಹೊರತ್ತಿಗೆ ಮೊಹಮದ್‌ ಸಾದಿಕ್‌ ಅವರು ಕುಟುಂಬ ಸಹಿತ ಮನೆಗೆ ಮರಳಿದ್ದಾರೆ. ಆಗ ಮನೆಯ ಚಿಲಕ ತೆಗೆದಿತ್ತು. ಗಾಬರಿಯಿಂದ ಒಳಗೆ ಹೋಗಿ ಪರಿಶೀಲಿಸಿದಾಗ ಕಳ್ಳತನವಾಗಿದೆ. ಆನವಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿ ಹಸಿರುಮಯ, ಎಎ ಸರ್ಕಲ್‌ ಜಗಮಗ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment