SHIMOGA, 8 SEPTEMBER 2024 : ಅಧಿಕಾರಿಗಳ (Officers) ಕ್ವಾರ್ಟರ್ಸ್‌ನಲ್ಲಿರುವ ಐದು ಮನೆಗಳಲ್ಲಿ ಕಳ್ಳತನವಾಗಿದೆ. ಒಂದು ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನವಾಗಿದೆ. ಬಸವನಗುಡಿಯ ಆಫೀಸರ್ಸ್ ಕ್ವಾರ್ಟರ್ಸ್‌ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಬೆಳಗ್ಗೆ ಪ್ರಕರಣ ಬಯಲಿಗೆ ಬಂದಿದೆ.
ಜಿಲ್ಲಾಧಿಕಾರಿ ಆಪ್ತ ಸಹಾಯಕ ದೀಪಕ್, ನ್ಯಾಯಾಧೀಶರ ಕಾರು ಚಾಲಕ ಪ್ರಕಾಶ್, ಎಸ್‌ಡಿಎ ಸಂಧ್ಯಾ, ವಾಣಿಜ್ಯ ತೆರಿಗೆ ಇಲಾಖೆಯ ನಂದಿನಿ ಅವರ ಮನೆಯಲ್ಲಿ ಕಳ್ಳತನವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಭಾಗ್ಯ ಅವರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನವಾಗಿದೆ.
ಬೆಳಗ್ಗೆ ವಿಷಯ ಬಯಲಿಗೆ
ಕಳೆದ ರಾತ್ರಿ ಕೃತ್ಯ ನಡೆದಿದ್ದು ಇಂದು ಬೆಳಗ್ಗೆ ವಿಷಯ ಬೆಳಕಿಗೆ ಬಂದಿದೆ. ಮನೆಗಳ ಬೀಗ ಮುರಿದು ನುಗ್ಗಿರುವ ಕಳ್ಳರು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಚಿನ್ನಾಭರಣ, ನಗದು ಸೇರಿ ಹಲವು ವಸ್ತುಗಳು ಕಳ್ಳತನವಾಗಿದೆ ಎನ್ನಲಾಗಿದೆ. ಇವುಗಳ ನಿಖರ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ಇದನ್ನೂ ಓದಿ » ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?
ಹಬ್ಬ ಸೇರಿದಂತೆ ವಿವಿಧ ಕಾರಣಕ್ಕೆ ಅಧಿಕಾರಿಗಳು ಕುಟುಂಬ ಸಹಿತ ಊರಿಗೆ ಹೋಗಿದ್ದಾಗ ಕೃತ್ಯ ಎಸಗಲಾಗಿದೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದವು. ಜಯನಗರ ಠಾಣೆ ಇನ್ಸ್‌ಪೆಕ್ಟರ್ ಸಿದ್ದನಗೌಡ ಮತ್ತು ಸಿಬ್ಬಂದಿ ಪರಿಶೀಲಿಸಿದರು. ಜಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200