ಶಿವಮೊಗ್ಗದಲ್ಲಿ ಸಾಲು ಸಾಲು ಅಧಿಕಾರಿಗಳ ಮನೆಗಳ ಬೀಗ ಒಡೆದು ಕಳ್ಳತನ, ಎಲ್ಲಿ? ಹೇಗಾಯ್ತು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIMOGA, 8 SEPTEMBER 2024 : ಅಧಿಕಾರಿಗಳ (Officers) ಕ್ವಾರ್ಟರ್ಸ್‌ನಲ್ಲಿರುವ ಐದು ಮನೆಗಳಲ್ಲಿ ಕಳ್ಳತನವಾಗಿದೆ. ಒಂದು ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನವಾಗಿದೆ. ಬಸವನಗುಡಿಯ ಆಫೀಸರ್ಸ್‌ ಕ್ವಾರ್ಟರ್ಸ್‌ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಬೆಳಗ್ಗೆ ಪ್ರಕರಣ ಬಯಲಿಗೆ ಬಂದಿದೆ.

ಜಿಲ್ಲಾಧಿಕಾರಿ ಆಪ್ತ ಸಹಾಯಕ ದೀಪಕ್‌, ನ್ಯಾಯಾಧೀಶರ ಕಾರು ಚಾಲಕ ಪ್ರಕಾಶ್‌, ಎಸ್‌ಡಿಎ ಸಂಧ್ಯಾ, ವಾಣಿಜ್ಯ ತೆರಿಗೆ ಇಲಾಖೆಯ ನಂದಿನಿ ಅವರ ಮನೆಯಲ್ಲಿ ಕಳ್ಳತನವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಭಾಗ್ಯ ಅವರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನವಾಗಿದೆ.

ಬೆಳಗ್ಗೆ ವಿಷಯ ಬಯಲಿಗೆ

ಕಳೆದ ರಾತ್ರಿ ಕೃತ್ಯ ನಡೆದಿದ್ದು ಇಂದು ಬೆಳಗ್ಗೆ ವಿಷಯ ಬೆಳಕಿಗೆ ಬಂದಿದೆ. ಮನೆಗಳ ಬೀಗ ಮುರಿದು ನುಗ್ಗಿರುವ ಕಳ್ಳರು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಚಿನ್ನಾಭರಣ, ನಗದು ಸೇರಿ ಹಲವು ವಸ್ತುಗಳು ಕಳ್ಳತನವಾಗಿದೆ ಎನ್ನಲಾಗಿದೆ. ಇವುಗಳ ನಿಖರ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

theft-at-officers-quarters-in-shimoga.

ಇದನ್ನೂ ಓದಿ » ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್‌ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?

ಹಬ್ಬ ಸೇರಿದಂತೆ ವಿವಿಧ ಕಾರಣಕ್ಕೆ ಅಧಿಕಾರಿಗಳು ಕುಟುಂಬ ಸಹಿತ ಊರಿಗೆ ಹೋಗಿದ್ದಾಗ ಕೃತ್ಯ ಎಸಗಲಾಗಿದೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದವು. ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಸಿದ್ದನಗೌಡ ಮತ್ತು ಸಿಬ್ಬಂದಿ ಪರಿಶೀಲಿಸಿದರು. ಜಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Officers quarters at basavanagudi

ಇದನ್ನೂ ಓದಿ » ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment