ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಅಭರಣ, ನಗದು ದೋಚಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆ ಕಾರ್ಯ ಆರಂಭಿಸಿದ್ದಾರೆ.
ಶಿವಮೊಗ್ಗದ ತುಂಗಾ ನದಿ ತೀರದಲ್ಲಿರುವ ಅಪ್ಪಾಜಿರಾವ್ ಕಾಂಪೌಂಡ್’ನ ಶ್ರೀ ಮುನೇಶ್ವರ ದೇವಸ್ಥಾನಲ್ಲಿ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ದೇಗುಲದ ಬೀಗ ಒಡೆದು ಕಳವು ಮಾಡಿದ್ದಾರೆ.
ಹೇಗಾಯ್ತು ಘಟನೆ?
ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ ಆಡಳಿತ ಮಂಡಳಿಯವರು ಬೀಗ ಹಾಕಿ ತೆರಳಿದ್ದರು. ರಾತ್ರಿ ಕಳ್ಳರು ದೇಗುಲದ ಬೀಗು ಮುರಿದಿದ್ದಾರೆ. ಒಳಗಿದ್ದ ಎರಡು ಗಾಡ್ರೇಜ್ ಬೀರುವಿನ ಬೀಗಗಳನ್ನು ಒಡೆದಿದ್ದಾರೆ.

ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಇರಿಸಿದ್ದ 50 ಸಾವಿರ ರೂ. ನಗದು, ಹುಂಡಿಯಲ್ಲಿದ್ದ 4 ಸಾವಿರ ರೂ. ಕಾಣಿಕೆ ಹಣ, ದೇವರ ಮೂರ್ತಿಗಾಗಿ ನಿರ್ಮಿಸಲಾಗಿದ್ದ ಬಂಗಾರದ ಕಣ್ಣುಗಳು, ಮೂಗುತಿಯನ್ನು ಕದ್ದೊಯ್ದಿದ್ದಾರೆ. ಇದರ ಮೌಲ್ಯ 26 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






