ಶಿವಮೊಗ್ಗ ಲೈವ್.ಕಾಂ | SHIMOGA NEWS | 08 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೆಲಸಗಾರರು ನಿದ್ರೆ ಮಾಡುತ್ತಿದ್ದಾಗ ನಿರ್ಮಾಣ ಹಂತದ ಕಟ್ಟಡದಲ್ಲಿ ಕಳ್ಳತನವಾಗಿದೆ. ನೀರಿನ ಮೋಟರ್, ಕಬ್ಬಿಣದ ಬೀಮ್ ಕ್ಲ್ಯಾಂಪ್, ಮೊಬೈಲ್’ಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಶಿವಮೊಗ್ಗದ ಶರಾವತಿ ನಗರದ ಎ ಬ್ಲಾಕ್’ನ 3ನೇ ಕ್ರಾಸ್’ನಲ್ಲಿ ಚಂದ್ರಪ್ಪ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟದಲ್ಲಿ ಘಟನೆ ಸಂಭವಿಸಿದೆ.
ರಾತ್ರಿ ಕೆಲಸಗಾರರು ನಿದ್ರೆ ಮಾಡುತ್ತಿದ್ದಾಗ ನುಗ್ಗಿರುವ ಕಳ್ಳರು ಒಂದು ಹೆಚ್.ಪಿ ಸಬ್ ಮರ್ಷಿಬಲ್ ಮೋಟಾರ್, ಎರಡು ಮೊಬೈಲ್’ಗಳು, 33 ಕಬ್ಬಿಣದ ಬೀಮ್ ಕ್ಲಾಂಪ್’ಗಳನ್ನು ಹೊತ್ತೊಯ್ದಿದ್ದಾರೆ. ನಿರ್ಮಾಣ ಹಂತದ ಕಟ್ಟಡವಾದ್ದರಿಂದ ಯಾವುದೆ ಬಾಗಿಲುಗಳು ಇರಲಿಲ್ಲ. ಹಾಗಾಗಿ ಸುಲಭವಾಗಿ ಕಳ್ಳತನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






