ಗೋಪಾಲಗೌಡ ಬಡಾವಣೆಯಲ್ಲಿ ಮುಂದುವರೆದ ಕಳ್ಳತನ, ಮನೆ ಬೀಗ ಒಡೆದು ಚಿನ್ನಾಭರಣ, ರೇಷ್ಮೆ ಸೀರೆ, ದುಬಾರಿ ವಾಚ್ ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021

ಗೋಪಾಲಗೌಡ ಬಡಾವಣೆಯಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಮನೆಯೊಂದರ ಬೀಗ ಒಡೆದು ಚಿನ್ನಾಭರಣ, ಸೀರೆಗಳು, ದುಬಾರಿ ವಾಚ್’ಗಳನ್ನು ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ |  ಗಮನ ಬೇರೆಡೆ ಸೆಳೆದು ಚಿನ್ನದ ಸರ ಕಳವು, ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ ವೈರಲ್

ಗೋಪಾಲಗೌಡ ಬಡಾವಣೆಯ ಇ ಬ್ಲಾಕ್’ನಲ್ಲಿರುವ ಮಂಜಪ್ಪಗೌಡ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೇಗಾಯ್ತು ಕಳ್ಳತನ?

ಗೋಪಾಲಗೌಡ ಬಡಾವಣೆಯಲ್ಲಿರುವ ಮನೆಗೆ ಬೀಗ ಹಾಕಿ, ಮಂಜಪ್ಪಗೌಡ ಅವರು ಹೊಸನಗರದಲ್ಲಿರುವ ತಮ್ಮ ತೋಟಕ್ಕೆ ಹೋಗಿದ್ದರು. ಅವರು ಮನೆಗೆ ಹಿಂತಿರುಗಿದಾಗ ಬಾಗಿಲ ಬೀಗ ಒಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ | ಕಳ್ಳರು, ದರೋಡೆಕೋರರಿಂದ ರಕ್ಷಿಸಿಕೊಳ್ಳಲು ಗಸ್ತು ಆರಂಭಿಸಿದ ಜನ, ಫೋಟೊ ರಿಲೀಸ್

ಕಳ್ಳರು ಮನೆಯ ಎರಡು ಬೆಡ್ ರೂಂಗಳಲ್ಲಿ ಹುಡುಕಾಡಿದ್ದಾರೆ. ಬಂಗಾರದ 30 ಗ್ರಾಂನ ಎರಡು ಚೈನ್ ಮತ್ತು ಪೆಂಡೆಂಟ್, 8 ಗ್ರಾಂನ ಮಕ್ಕಳ ಚೈನ್, 5 ಗ್ರಾಂನ ಮಾಣಿಕ್ಯ ಹರಳಿನ ರಿಂಗ್, 3 ಗ್ರಾಂನ ಮಕ್ಕಳ ಕಿವಿಯೋಲೆ, 15 ಗ್ರಾಂನ ಮೂರು ಜೊತೆ ಕಿವಿಯೋಲೆಗಳನ್ನು ಕಳ್ಳತನ ಮಾಡಿದ್ದಾರೆ. 25 ಸಾವಿರ ರೂ. ಮೌಲ್ಯದ ರೇಷ್ಮೆ ಸೀರೆಗಳು, 30 ಸಾವಿರ ರೂ. ಮೌಲ್ಯದ ಎರಡು ವಾಚುಗಳನ್ನು ಕೂಡ ಕಳ್ಳರು ಕದ್ದೊಯ್ದಿದ್ದಾರೆ.

1632381439867456 3

ಗೋಪಾಲಗೌಡ ಬಡಾವಣೆಯಲ್ಲಿ ಕಳ್ಳತನ, ರಸ್ತೆಗಿಳಿದವರನ್ನು ಅಡ್ಡಗಟ್ಟಿ ದರೋಡೆ ಮಾಡುವ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆ ನಿವಾಸಿಗಳು ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಅಲ್ಲದೆ ರಾತ್ರಿ ವೇಳೆ ಸ್ಥಳೀಯರೆ ಕೆಲಹೊತ್ತು ಗಸ್ತು ಆರಂಭಿಸಿದ್ದರು. ಈ ನಡುವೆಯು ಕಳ್ಳತನವಾಗಿರುವುದು ಸ್ಥಳೀಯರ ಆತಂಕ ಹೆಚ್ಚಿಸಿದೆ.

LifeSpring%2BKan%2B02

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 25, 2021

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment