ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2025
ಶಿವಮೊಗ್ಗ : ಬಸ್ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. KSRTC ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್ನಿಂದ ಕಳ್ಳತನವಾಗಿದೆ.
ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ತಮ್ಮೂರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತಿದ್ದರು. ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ಗಮನಿಸಿದಾಗ ಜಿಪ್ ತೆರೆದಿರುವುದು ಗೊತ್ತಾಗಿದೆ. ಒಳಗಿದ್ದ ಪರ್ಸ್ ನಾಪತ್ತೆಯಾಗಿತ್ತು. ಅದರಲ್ಲಿ 75 ಸಾವಿರ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ, 1500 ರೂ. ನಗದು, ವಿವಿಧೆ ಬ್ಯಾಂಕುಗಳ ಎಟಿಎಂ ಕಾರ್ಡುಗಳಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಸ್ ಹತ್ತುವಾಗ ಹೆಚ್ಚು ಜನ ದಟ್ಟಣೆ ಇತ್ತು. ಈ ಸಂದರ್ಭ ಕಳ್ಳರು ವ್ಯಾನಿಟಿ ಬ್ಯಾಗ್ ಜಿಪ್ ತೆಗೆದು ಕಳ್ಳತನ ಮಾಡಿದ್ದಾರೆ ಎಂದು ಗೀತಾ ಅವರು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಎರಡು ಇಂದಿರಾ ಕ್ಯಾಂಟೀನ್, ಎಲ್ಲೆಲ್ಲಿ? ಯಾವಾಗ ಶುರುವಾಗುತ್ತೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






