SHIMOGA : ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗಿನಲ್ಲಿದ್ದ (Vanity Bag) ಚಿನ್ನದ ಸರ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಏನಿದು ಪ್ರಕರಣ?
ಉಡುಪಿಯಲ್ಲಿ ಮನೆ ದೇವರ ಪೂಜೆ ಮುಗಿಸಿ ಪದ್ಮಾವತಿ ರಾವ್ ಎಂಬುವವರು ಖಾಸಗಿ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತಮ್ಮೂರು ಹಾವೇರಿ ಜಿಲ್ಲೆ ಹಿರೇಕೆರೂರಿನ ಹಂಸಬಾವಿಗೆ ಹೊರಟಿದ್ದರು. ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ತಮ್ಮ ವ್ಯಾನಿಟಿ ಬ್ಯಾಗ್ (Vanity Bag) ತೆಗೆದಾಗ ಕಳ್ಳತನವಾಗಿದೆ ಎಂಬುದು ಅವರ ಅರಿವಿಗೆ ಬಂದಿದೆ.
ವ್ಯಾನಿಟಿ ಬ್ಯಾಗಿನಲ್ಲಿ 15 ಸಾವಿರ ರೂ. ನಗದು, 33 ಗ್ರಾಂ ತೂಕದ ಬಂಗಾರದ ಅವಲಕ್ಕಿ ಸರ ಕಳ್ಳತನವಾಗಿತ್ತು. ಸರದ ಅಂದಾಜು ಮೌಲ್ಯ 1.32 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಎಲ್ಲೆಡೆ ಹುಡುಕಾಡಿದ ಪದ್ಮಾವತಿ ರಾವ್ ಅವರು ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ