ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 16 ಜುಲೈ 2019
ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಔಷಧಿ ತೆಗೆದುಕೊಳ್ಳಲು ಕ್ಯೂನಲ್ಲಿ ನಿಂತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್’ನಿಂದ ಪರ್ಸ್ ಕಳ್ಳತನ ಮಾಡಿದ್ದ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 1.69 ಲಕ್ಷ ರೂ. ಮೌಲ್ಯದ ಮೊಬೈಲ್, ನಗದು, ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗೋಪಾಳದ ತಾಹೀರಾ ರೂಹಿ ಬಂಧಿತಳು. ಭದ್ರಾವತಿಯ ಹೆಬ್ಬಂಡಿಯ ನೇತ್ರಾವತಿ ಎಂಬುವವರ ವ್ಯಾನಿಟಿ ಬ್ಯಾಗ್’ನಿಂದ ಪರ್ಸ್ ಕಳ್ಳತನ ಮಾಡಿದ್ದಳು. ಈ ಕುರಿತು ನೇತ್ರಾವತಿ ಅವರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.
ತನಿಖೆ ಆರಂಭಿಸಿದ ದೊಡ್ಡಪೇಟೆ ಪೊಲೀಸರಿಗೆ, ಹಿಂದೆಯೂ ಇಂತದ್ದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಾಹೀರಾ ರೂಹಿ ಮೇಲೆ ಅನುಮಾನ ಮೂಡಿತ್ತು. ವಿಚಾರಣೆ ನಡೆಸಿದಾಗ, 18 ಸಾವಿರ ರೂ. ಮೊಬೈಲ್, ಸಾವಿರ ರೂ. ನಗದು, ಸುಮಾರು 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.
ತಾಹೀರಾ ರೂಹಿ, ಈ ಹಿಂದೆ ಬಸ್ಸುಗಳಲ್ಲಿ ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಇದೇ ಮಾದರಿಯಲ್ಲಿ ಕಳ್ಳತನ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]