ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಹೊಸನಗರ : ಮನೆಯಲ್ಲಿ ಕಳವು ಮಾಡುತ್ತಿದ್ದ ಆರೋಪಿಯನ್ನು (Thief) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟ್ಟಿನಹೊಳೆ ಗ್ರಾಮದ ಕೆ.ಆರ್. ಶರತ್ (26) ಬಂಧಿತ.
ಈತನಿಂದ 1 ಲಕ್ಷ ರೂ. ಮೌಲ್ಯದ 12 ಗ್ರಾಂನ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಈಚೆಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಆಗ ಮನೆಯ ಬೀಗ ಮುರಿದು 12 ಗ್ರಾಂನ ಚಿನ್ನದ ಸರ ಹಾಗೂ 15 ಸಾವಿರ ರೂ. ನಗದು ಕಳ್ಳತನವಾಗಿತ್ತು.

ಈ ಸಂಬಂಧ ಪರಮೇಶ್ವರಯ್ಯ ಠಾಣೆಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಶರತ್‌ನನ್ನು ಬಂಧಿಸಿದ್ದಾರೆ. ಸಿಪಿಐ ಗುರಣ್ಣ ಎಸ್. ಹೆಬ್ಬಾಳ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಿವಾನಂದ ಕೋಳಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಸಿಬ್ಬಂದಿ ಕುಮಾರ್.ಟಿ, ಶೇಕ್ ಅಮೀರ್ ಜಾನ್, ಕಿರಣ್, ವಿಶ್ವನಾಥ್, ಪ್ರವೀಣ್ ಕುಮಾರ್, ವಿಶ್ವನಾಥ್, ರವಿಚಂದ್ರ, ಸುಜಯ್ ಕುಮಾರ್, ಪ್ರಜ್ವಲ್.ಡಿ.ಎಸ್ ಮತ್ತು ಸಚಿನ್ ಕಾರ್ಯಾಚರಣೆಯಲ್ಲಿದ್ದರು.
ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್ ಮೇಲಿದ್ದ ಟ್ರಾಫಿಕ್ ಪೊಲೀಸ್ ರಿಫ್ಲೆಕ್ಟರ್ ಕಟೌಟ್ ಕದ್ದೊಯ್ದ ದುಷ್ಕರ್ಮಿಗಳು






