ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021
ಹಳ್ಳಿಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಆವಿನಹಳ್ಳಿ ಬಳಿ ಅನುಮಾನಾಸ್ಪದವಾಗಿ ಕಂಡ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮನೆಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.
ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ
ಬಂಧಿತ ಯುವಕನಿಂದ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು, ನಗದು ಮತ್ತು ಬೈಕ್ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ 4,71,660 ರೂ. ಎಂದು ತಿಳಿದು ಬಂದಿದೆ.
ಸಾಗರ ಡಿವೈಎಸ್’ಪಿ ವಿನಾಯಕ್ ಶೆಟಗೇರಿ ಸೂಚನೆ ಮೇರೆಗೆ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಗಿರೀಶ್, ಸಬ್ ಇನ್ಸ್’ಪೆಕ್ಟರ್ ಸುಜಾತಾ, ಸಿಬ್ಬಂದಿ ಶ್ರೀಧರ್, ಗಿರೀಶ್ ಬಾಬು, ಅಶೋಕ್, ಈರಯ್ಯ, ಪ್ರಕಾಶ್, ಮೇಘರಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200