ತೀರ್ಥಹಳ್ಳಿ : ಮನೆಗಳ್ಳತನಕ್ಕೆ (Thief) ಬಂದಾತ ಜನರನ್ನು ಕಂಡು ಪರಾರಿಯಾಗುವಾಗ ಜಲಜೀವನ್ ಮಿಷನ್ ಯೋಜನೆಯ ಪೈಪ್ ಅಳವಡಿಸಲು ತೋಡಿದ್ದ ಗುಂಡಿ ಬಿದ್ದು ಗಾಯಗೊಂಡಿದ್ದಾನೆ. ಊರಿನವರೆ ಆತನನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಇ.ಡಿ ಪ್ರಶ್ನೆ, ಸತತ 11 ಗಂಟೆ ವಿಚಾರಣೆ
ತೀರ್ಥಹಳ್ಳಿ ತಾಲೂಕು ದೇಮ್ಲಾಪುರ ಗ್ರಾಮದ ಚಂದ್ರಶೇಖರ್ ಎಂಬುವವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದಾಗ ಘಟನೆ ಸಂಭವಿಸಿದೆ.
ಏನಿದು ಪ್ರಕರಣ?
ಚಂದ್ರಶೇಖರ್ ಅವರು ತೋಟದಲ್ಲಿ ಔಷಧಿ ಹೊಡೆಯಲು ಹೋಗಿದ್ದರು. ಅವರ ಪತ್ನಿ ಮತ್ತು ಮಗ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಮಧ್ಯಾಹ್ನ ಚಂದ್ರಶೇಖರ್ ಅವರು ಮನೆಗೆ ಮರಳಿದ್ದು, ಆಗ ವ್ಯಕ್ತಿಯೊಬ್ಬ (Thief) ಮನೆಯ ಬಾಗಿಲಿನ ಬೀಗ ಒಡೆಯುತ್ತಿರುವುದನ್ನು ಗಮನಿಸಿದ್ದಾರೆ. ಚಂದ್ರಶೇಖರ್ ಜೋರಾಗಿ ಕೂಗಿಕೊಂಡಿದ್ದು, ನೆರೆ ಹೊರೆಯ ಮನೆಯ ಜನರೆಲ್ಲ ಅತ್ತ ಧಾವಿಸಿದ್ದಾರೆ.

ಆತಂಕಗೊಂಡ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಸಂದರ್ಭ ಪೈಪ್‌ಲೈನ್ ಅಳವಡಿಸಲು ತೋಡಿದ್ದ ಗುಂಡಿಗೆ ಬಿದ್ದು ಗಾಯಗೊಂಡಿದ್ದಾನೆ. ಗ್ರಾಮಸ್ಥರೆ ಆತನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳತನಕ್ಕೆ ಬಂದವನ ಹೆಸರನ್ನು ಹನೀಫ್ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200