ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 9 ಜನವರಿ 2020
16 ಮನೆಗಳ ಬೀಗ ಒಡೆದು ಕಳ್ಳತನ ಮಾಡಿದ್ದ ಎಂಟು ಕಳ್ಳರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಿಕಾರಿಪುರ, ಶಿರಾಳಕೊಪ್ಪ, ಸೊರಬ, ಆನವಟ್ಟಿಯಲ್ಲಿ ಈ ಕಳ್ಳರು ತಮ್ಮ ಕೈಚಳಕ ತೋರಿಸಿದ್ದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು, ಮಂಜುನಾಥ್, ರಂಗಪ್ಪ, ವೆಂಕಟೇಶ್, ಶಶಿಕುಮಾರ್, ರಾಜೇಶ್, ಗವಿರಾಜ್, ರಾಜಪ್ಪ, ಲೋಕೇಶ್ ಎಂಬುವವರನ್ನು ಬಂಧಿಸಲಾಗಿದೆ ಎಂದರು.
ಬಂಧಿತರಿಂದ ಸುಮಾರು 27 ಲಕ್ಷ ಮೌಲ್ಯದ 774 ಗ್ರಾಂ ಬಂಗಾರ, 4 ಕೆಜಿ 761 ಗ್ರಾಂ ತೂಕದ ಬೆಳ್ಳಿ ಅಭರಣ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಹುಂಡೈ ಕಾರು ಹಾಗೂ ಟಾಟಾ ಏಸ್ ಲಗೇಜ್ ವಾಹನ ಸಹ ಸೀಜ್ ಮಾಡಲಾಗಿದೆ.
ಈ ಕಳ್ಳರ ವಿರುದ್ಧ ಶಿಕಾರಿಪುರ, ಶಿರಾಳಕೊಪ್ಪ ಠಾಣೆಗಳಲ್ಲಿ ತಲಾ ನಾಲ್ಕು ಪ್ರಕರಣಗಳು, ಆನವಟ್ಟಿಯಲ್ಲಿ 6 ಪ್ರಕರಣಗಳು, ಸೊರಬ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿವೆ.
ಶಿಕಾರಿಪುರ ವಿಭಾಗದ ಹೆಚ್ಚುವರಿ ರಕ್ಷಣಾಧಿಕಾರಿ ಶ್ರೀನಿವಾಸುಲು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422