ಶಿವಮೊಗ್ಗ ಲೈವ್
ಶಿವಮೊಗ್ಗ: ವಿದ್ಯಾನಗರದ ಜ್ಯೋತಿರಾವ್ ಬಡಾವಣೆಯಲ್ಲಿ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಿಂಗರಾಜು ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ನಿಂಗರಾಜು ಹಾಗೂ ಅವರ ಪತ್ನಿ ಇಬ್ಬರೂ ಪಿಡಿಒಗಳಾಗಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕರ್ತವ್ಯಕ್ಕೆ ತೆರಳಿದ್ದರು. ಈ ಸಂದರ್ಭ ಕೃತ್ಯ ನಡೆದಿದೆ. ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳು ಕಳುವಾಗಿವೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿಯನ್ನೂ ಓದಿ
ಸಾಗರದ ಕಾಸ್ಪಾಡಿ ಕೆರೆ ಏರಿ ಮೇಲೆ ತಪ್ಪಿದ ಅನಾಹುತ, ಹೇಗಾಯ್ತು ಅಪಘಾತ?
