ಓಂ ಶಕ್ತಿ ದೇಗುಲದಿಂದ ಶಿವಮೊಗ್ಗದ ಮನೆಗೆ ಮರಳಿದಾಗ ತೆರೆದಿತ್ತು ಮುಂದಿನ ಬಾಗಿಲು, ಕುಟುಂಬಕ್ಕೆ ಶಾಕ್‌

Published On : ಜನವರಿ 19, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಕುಟುಂಬ ಸಮೇತ ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭ ಮನೆಯ ಬೀಗ ಮುರಿದು ನಗದು ಮತ್ತು ಚಿನ್ನಾಭರಣ (gold) ದೋಚಲಾಗಿದೆ. ಶಿವಮೊಗ್ಗದ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿ ನಡೆದಿದೆ.

ಹೆಚ್.ಕೆ. ರಂಗನಾಥ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ರಂಗನಾಥ್ ಅವರು ಕುಟುಂಬದೊಂದಿಗೆ ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ಹೋಗಿದ್ದರು. ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಒಳಗೆ ಪರಿಶೀಲಿಸಿದಾಗ ಬೀರುವಿನ ಲಾಕ್ ಮುರಿದು ಅದರಲ್ಲಿದ್ದ ಸುಮಾರು ₹21,000 ಮೌಲ್ಯದ ಬಂಗಾರದ ಒಡವೆಗಳು ಮತ್ತು ₹50,000 ನಗದು ಕಳ್ಳತನ ಮಾಡಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Total-Readers-of-Shivamogga-Live

ಇದನ್ನೂ ಓದಿ – ಕಾರು ಡಿಕ್ಕಿಯಾಗಿ ಮತ್ತೊಂದು ಕಾರಿನ ಚಾಲಕ ಸಾವು, ಹೇಗಾಯ್ತು ಘಟನೆ?

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 19, 2026

Leave a Comment