ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS | 8 ಸೆಪ್ಟೆಂಬರ್ 2021
ನಡು ರಸ್ತೆಯಲ್ಲಿ ಚಾಕು, ಭರ್ಚಿ ತೋರಿಸಿ ಆತಂಕ ಮೂಡಿಸಿದ್ದ ಮೂವರು ಯುವಕರನ್ನು ಸಾರ್ವಜನಿಕರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಗಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ಯುವಕರು ದರೋಡೆಕೋರರು ಇರಬೇಕು ಎಂದು ಜನರು ಶಂಕಿಸಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಏನಿದು ಘಟನೆ? ಮಾರಕಾಸ್ತ್ರ ತೋರಿಸಿದ್ದೇಕೆ?
ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿಕ ಬೆಳಗ್ಗೆ ಕಾರಿನಲ್ಲಿ ಬಂದ ಯುವಕರು ಕ್ಷುಲಕ ವಿಚಾರಕ್ಕೆ ಸಾರ್ವಜನಿಕರಿಗೆ ಚಾಕು, ಬರ್ಚಿ ತೋರಿಸಿದ್ದರು. ನೂರು ಅಡಿ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮತ್ತು ಪೊಲೀಸ್ ಬ್ಯಾರಿಕೇಡ್’ಗೆ ಡಿಕ್ಕಿ ಹೊಡೆದಿದ್ದಾರೆ. ಈ ಬಗ್ಗೆ ಜನರು ಪ್ರಶ್ನೆ ಮಾಡಿದ್ದಾರೆ.
ಚಾಕು, ಭರ್ಚಿ ಹೊರತೆಗೆದರು
ಜನರು ಗುಂಪುಗೂಡಿ ಪ್ರಶ್ನೆ ಮಾಡುತ್ತಿದ್ದಂತೆ ಕಾರಿನಲ್ಲಿದ್ದ ನಾಲ್ವರು ಮಾರಕಾಸ್ತ್ರಗಳನ್ನು ಹೊರಗೆ ತೆಗೆದಿದ್ದಾರೆ. ಚಾಕು, ಬರ್ಚಿಗಳನ್ನು ಜನರತ್ತ ತೋರಿಸಿ ಬೆದರಿಸಿದ್ದಾರೆ. ಹತ್ತಿರ ಬಂದರೆ ಚುಚ್ಚುವುದಾಗಿ ಹೆದರಿಸಿದ್ದಾರೆ. ಇದರಿಂದ ಜನರು ಆತಂಕಕ್ಕೀಡಾಗಿದ್ದಾರೆ. ಈ ನಡುವೆ ತಾವು ತಂದಿದ್ದ ಕಾರನ್ನು ಹಿಂದಕ್ಕೆ ತಿರುಗಿಸಿಕೊಂಡು ಹೋಗಲು ಯತ್ನಿಸಿದ್ದಾರೆ.
ಅಟ್ಟಾಡಿಸಿ ಹಿಡಿದ ಜನರು
ಚಾಕು, ಬರ್ಚಿ ತೋರಿಸುತ್ತಿದ್ದಂತೆ ವಾಕಿಂಗ್ ಮಾಡುತ್ತಿದ್ದ ಯುವಕರು ಕಾರಿನಲ್ಲಿದ್ದ ಯುವಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇದಕ್ಕೆ ಕ್ಯಾರೆ ಅನ್ನದೆ ಚಾಕು ಬೀಸಲು ಮುಂದಾದಾಗ ಸಾರ್ವಜನಿಕರು ಜೊತೆಯಾಗಿ ಯುವಕರನ್ನು ಹಿಡಿಯಲು ಮುಂದಾಗಿದ್ದಾರೆ. ಆಗ ಕಾರು ಬಿಟ್ಟು ನಾಲ್ವರು ಪರಾರಿಯಾಗಲು ಯತ್ನಿಸಿದ್ದಾರೆ. ಒಬ್ಬೊಬ್ಬರು ಒಂದೊಂದು ದಿಕ್ಕಿಗೆ ಓಡಿದ್ದಾರೆ. ಜನರು ಯುವಕರನ್ನು ಅಟ್ಟಾಡಿಸಿ ಹಿಡಿದು, ಥಳಿಸಿದ್ದಾರೆ.
ಕಾರಿನಲ್ಲಿತ್ತಾ ಗಾಂಜಾ? ಮತ್ತಲ್ಲಿದ್ದರಾ ಯುವಕರು?
ಕಾರಿನಲ್ಲಿದ್ದ ಯುವಕರು ಗಾಂಜಾ ಸೇವಿಸಿದ್ದರು. ಅದರ ಮತ್ತಿನಲ್ಲೇ ದುಷ್ಕೃತ್ಯ ಎಸಗಲು ಮುಂದಾಗಿದ್ದರು ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು, ‘ಗಾಂಜಾ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಾರನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗುತ್ತದೆ. ಅಲ್ಲದೆ ಆರೋಪಿಗಳನ್ನು ಮೆಡಿಕಲ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅದರ ವರದಿ ಬಂದಿ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.
ಒಬ್ಬನಿಗೆ ಕ್ರಿಮಿನಲ್ ಹಿನ್ನೆಲೆ
ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬನಿಗೆ ಕ್ರಿಮಿನಲ್ ಹಿನ್ನೆಲೆ ಇತ್ತು ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದರು. ಅಂಗಡಿಯೊಂದರಲ್ಲಿ 2.50 ಲಕ್ಷ ರೂ. ಹಣ ಕಳವು ಮಾಡಿ ಸಿಕ್ಕಿಬಿದ್ದಿದ್ದ. ಎರಡು ವಾರದ ಹಿಂದಷ್ಟೆ ಈತ ಜಾಮೀನಿನ ಮೇಲೆ ಹೊರಬಂದಿದ್ದ. ಸದ್ಯ ಮೂವರನ್ನು ಬಂಧಿಸಲಾಗಿದೆ. ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಕದ್ದ ಕಾರಿನಲ್ಲಿ ಓಡಾಡುತ್ತಿದ್ದರು
ಮಾರಕಾಸ್ತ್ರ ಸಹಿತ ಓಡಾಡುತ್ತಿದ್ದ ಯುವಕರು ಬಳಕೆ ಮಾಡಿಕೊಂಡಿದ್ದ ಕಾರು ಅವರದ್ದಲ್ಲ. ಕಾರು ಕಳ್ಳತನ ಮಾಡಿಕೊಂಡು ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅನ್ನುವುದು ಗೊತ್ತಾಗಿದೆ. ‘ಕಾರು ಕಳ್ಳತನ ಆಗಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
‘ಭಾರಿ ಸಂಚು ರೂಪಿಸಿಕೊಂಡಿರುವ ಶಂಕೆ’
ಘಟನೆ ಸಂದರ್ಭ ಸ್ಥಳದಲ್ಲಿದ್ದ ಮಹಾನಗರ ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ‘ಇವರೆಲ್ಲ ದುಷ್ಕೃತ್ಯ ನಡೆಸುವ ಉದ್ದೇಶದಿಂದಲೆ ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿರುವ ಶಂಕೆ ಇದೆ. ಇವರನ್ನು ವಿಚಾರಣೆಗೆ ಒಳಪಡಿಸಿದರೆ ಇನ್ನಷ್ಟು ಕಠೋರ ಸತ್ಯಗಳು ಹೊರಬರಲಿವೆ’ ಎಂದು ಆರೋಪಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಜಯನಗರ ಠಾಣೆಗೆ ಭೇಟಿ ನೀಡಿ ಇನ್ಸ್ ಪೆಕ್ಟರ್ ಎಸ್. ರವಿ, ಪಿಎಸ್ಐ ರಹಮತ್ ಅಲಿ ಅವರಿಂದ ಮಾಹಿತಿ ಪಡೆದರು. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200