SHIVAMOGGA LIVE NEWS | 1 DECEMBER 2023
KUMSI : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲಿನ ಬೀಗ ಒಡೆದು ಚಿನ್ನಾಭರಣ (jewellery) ಕಳ್ಳತನ ಮಾಡಲಾಗಿದೆ. ಹಾರನಹಳ್ಳಿಯ ಶಶಿಧರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಕುಟುಂಬದವರು ದಾವಣಗೆರೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಬರುವಷ್ಟರಲ್ಲಿ ಕೃತ್ಯ ನಡೆದಿದೆ.
ನ.23ರಂದು ಸಂಜೆ 4.30ಕ್ಕೆ ಮನೆಯಿಂದ ತೆರಳಿದ್ದು ಸಂಜೆ 7.30ಕ್ಕೆ ಶಶಿಧರ್ ಅವರ ಕುಟುಂಬದವರು ಹಿಂತಿರುಗಿದ್ದಾರೆ. ಆಗ ಮನೆ ಬಾಗಿಲಿನ ಬೀಗ ಒಡೆದಿರುವುದು ಗೊತ್ತಾಗಿದೆ. ಒಳಗೆ ಹೋಗಿ ನೋಡಿದಾಗಿ 3.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ (jewellery) ಕಳುವಾಗಿರುವುದು ಬೆಳಕಿಗೆ ಬಂದಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಫೇಸ್ಬುಕ್ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್, ಆರೋಪಿ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200