ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯ ಮೀಟರ್ ಬೋರ್ಡ್ ಮೇಲೆ ಇಟ್ಟಿದ್ದ ಬೀಗದ ಕೀಯನ್ನು (hidden key) ಬಳಸಿ, ಮನೆಯೊಳಗೆ ಪ್ರವೇಶಿಸಿದ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಒಡವೆ ಹಾಗೂ ನಗದು ದೋಚಿದ್ದಾರೆ. ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ನಿಧಿಗೆ ಗ್ರಾಮದ ಟಿ.ಎಸ್.ಡಬ್ಲ್ಯೂ ಕಾಲೋನಿಯ ನಿವಾಸಿ ರಾಮು.ಸಿ. ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ರಾಮು ಮತ್ತು ಅವರ ಪತ್ನಿ ಸಾವಿತ್ರಿ ಇಬ್ಬರೂ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 12:30ರ ಸುಮಾರಿಗೆ ರಾಮು ಅವರ ತಾಯಿ ಮುನಿಯಮ್ಮ ಅವರು ಹಸು ಮೇಯಿಸಲು ಹೋಗುವಾಗ, ಮನೆಯ ಬಾಗಿಲಿಗೆ ಬೀಗ ಹಾಕಿ ಅದರ ಕೀಯನ್ನು ಮನೆಯ ಮೀಟರ್ ಬೋರ್ಡ್ ಮೇಲೆ ಇಟ್ಟು ಹೋಗಿದ್ದರು.

ಇದನ್ನು ಗಮನಿಸಿರುವ ಕಳ್ಳರು, ಮೀಟರ್ ಬೋರ್ಡ್ ಮೇಲಿದ್ದ ಕೀ ಬಳಸಿ ಬಾಗಿಲು ತೆರೆದು ಒಳ ನುಗ್ಗಿದ್ದಾರೆ. ಮನೆಯ ಬೆಡ್ ರೂಂನಲ್ಲಿದ್ದ ಬೀರುವನ್ನು ತೆರೆದು, ಅದರಲ್ಲಿದ್ದ ಸುಮಾರು ₹2,95,000ಮೌಲ್ಯದ ಚಿನ್ನ, ಬೆಳ್ಳಿಯ ವಸ್ತುಗಳನ್ನು ಮತ್ತು ₹25,000 ನಗದು ದೋಚಿದ್ದಾರೆ ಎಂದು ಆರೋಪಿಸಾಗಿದೆ.
ಇದನ್ನೂ ಓದಿ – ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ
ರಾಮು ಅವರ ಪತ್ನಿ ಸಾವಿತ್ರಿ ಅವರು ಕೆಲಸದಿಂದ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು














