ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021
ಖಚಿತ ಮಾಹಿತಿ ಮೇರೆಗೆ ಕಾರು, ಬೈಕ್ ತಪಾಸಣೆ ನಡೆಸಿದ ತೀರ್ಥಹಳ್ಳಿ ಠಾಣೆ ಪೊಲೀಸರು, ಗಾಂಜಾ ವಶಕ್ಕೆ ಪಡೆದಿದ್ದಾರೆ. ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ.
ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಕಾರಿನಲ್ಲಿ ಗಾಂಜಾ ಸಾಗಣೆ ಮಾಡಲಾಗುತಿತ್ತು. ಖಚಿತ ಮಾಹಿತಿ ಮೇರೆಗೆ ಕೋಣಂದೂರು ರಸ್ತೆಯ ಸುರಾನಿ ಕ್ರಾಸ್‍ನಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಕಾರಿನ ಡಿಕ್ಕಿಯಲ್ಲಿ 870 ಗ್ರಾಂ ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ 10 ಸಾವಿರ ರೂ. ಅಂದಾಜಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ, ಯಾರೆಲ್ಲ ಲಸಿಕೆ ಪಡೆಯಬಹುದು? ಸ್ಥಳ ಎಲ್ಲಿ?
ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ಕೋಣಂದೂರಿನ ರಾಘವೇಂದ್ರ (39), ಆನಂದಪುರದ ಚಂದ್ರಶೇಖರ್ (35), ಹೊಸನಗರದ ನಾಗರಕೊಡಿಗೆ ಶೈಲೇಂದ್ರ ಕುಮಾರ್ (32), ರಿಪ್ಪನ್‍ಪೇಟೆಯ ಹರ್ಷ (30) ಎಂಬುವವರನ್ನು ಬಂಧಿಸಲಾಗಿದೆ.
ಗಾಂಜಾ, ಒಂದು ಕಾರು, ಒಂದು ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





