ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?

 SHIVAMOGGA LIVE NEWS 

ಶಿವಮೊಗ್ಗ | ‘ಮುಸ್ಲಿಂ ಗೂಂಡ’ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ (THREAT) ಒಡ್ಡಲಾಗಿದೆ. ಅವರ ಮನೆಗೆ ಬೆದರಿಕೆ ಪತ್ರ (LETTER) ಕಳುಹಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು (COMPLAINT) ಸಲ್ಲಿಸಲಾಗಿದೆ.

Shimoga Nanjappa Hospital

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಮುಸ್ಲಿಂ ಗೂಂಡಾ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ ಏನಿದೆ?

‘ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ (TIPPU SULTAN) ಬಗ್ಗೆ ಮುಸ್ಲಿಂ ಗೂಂಡಾ ಎಂದು ಹೇಳಿದ್ದೀಯಲ್ಲ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಮೋಟೆಬೆನ್ನೂರಿನ ಕಾಲೇಜಿಗೆ (COLLEGE) ಕಟ್ಟಡ ಕಟ್ಟಲು ನಮ್ಮ ಮುಸ್ಲಿಂ (MUSLIM) ಸಿಮೆಂಟ್ ಬ್ರಿಕ್ಸ್ ಬೇಕು ನಿನಗೆ. ಆದರೆ ನಿನಗೆ ಮುಸ್ಲಿಮರು ಬೇಡ. ನಾಚಿಕೆ ಆಗಬೇಕು. ನಾಲಗೆ ಕಟ್ ಮಾಡುತ್ತೇವೆ ಹುಷಾರು. ಬಾಲ ಬಿಚ್ಚಬೇಡ’ ಎಂದು ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿಗೆ ದೂರು

ಇನ್ನು, ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕರು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ‘ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಜಯಲಕ್ಷ್ಮಿ ನಿವಾಸಕ್ಕೆ ಅನಾಮದೇಯ ಬೆದರಿಕೆ ಪತ್ರ ಬಂದಿದೆ. ಈ ಕುರಿತು ಪರಿಶೀಲಿಸಿ ಮತ್ತು ತನಿಖೆ ಕೈಗೊಂಡು ಸೂಕ್ತ ಕಾನೂನು ಕ್ರಮ ವಹಿಸುವಂತೆ’ ದೂರು ನೀಡಲಾಗಿದೆ.

ಈಶ್ವರಪ್ಪ ಹೇಳಿದ್ದೇನು?

ಅನಾಮದೇಯ ಬೆದರಿಕೆ ಪತ್ರ ಬಂದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಯಾರೋ ಹೇಡಿಗಳು ಅನಾಮದೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಗೊಡ್ಡು ಬೆದರಿಕೆಗೆ, ಹೇಡಿಗಳು ಬರೆಯುವ ಪತ್ರಗಳಿಗೆ ನಾನು ಹೆದರುವುದಿಲ್ಲ. ಶಾಸಕನಾಗಿರುವ ಹಿನ್ನೆಲೆ ಈ ಹೇಡಿಯ ಕುರಿತು ತನಿಖೆಯಾಗಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದೇನೆ’ ಎಂದು ತಿಳಿಸಿದರು.

Shimoga Mythri Jewels

ಬೆದರಿಕೆ ಇದೆ ಮೊದಲಲ್ಲ

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬೆದರಿಕೆ ಹೊಸತೇನಲ್ಲ. ಈ ಹಿಂದೆ ಕೆ.ಎಸ್.ಈಶ್ವರಪ್ಪ ಅವರ ಮೊಬೈಲ್ ಸಂಖ್ಯೆಗೆ ವಿದೇಶದಿಂದ ಕರೆ ಮಾಡಿ ಬೆದರಿಕೆ (THREAT) ಒಡ್ಡಲಾಗಿತ್ತು. ಆಗ ಈಶ್ವರಪ್ಪ ಅವರಿಗೆ ಭದ್ರತೆ ಹೆಚ್ಚಳ ಮಾಡಲಾಗಿತ್ತು. ಈಗ ಪತ್ರದ ಮೂಲಕ ಬೆದರಿಕೆ ಒಡ್ಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಮೀಸಲು ಪ್ರಕಟ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 24, 2022 at 9:46 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 24, 2022

Leave a Comment