ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 FEBRUARY 2024
SHIMOGA : ಲೋಕಾಯುಕ್ತ ಅಧಿಕಾರಿಗಳೆಂದು ಕರೆ ಮಾಡಿ, ಸದ್ಯದಲ್ಲೇ ತಮ್ಮ ವಿರುದ್ಧ ಎಫ್ಐಆರ್ ದಾಖಲಾಗಲಿದೆ ಎಂದು ಮಹಿಳಾ ಅಧಿಕಾರಿಗೆ ಬೆದರಿಕೆಯೊಡ್ಡಲಾಗಿದೆ. ಅವರಿಂದ 1 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ವೇಳೆ ಮಹಿಳೆಗೆ ಕರೆ ಮಾಡಿ ಬೆದರಿಸಲಾಗಿದೆ.
ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ್ದರು. ಈ ಸಂದರ್ಭ ವಾಟ್ಸಪ್ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು ಬಂದಿದೆ. ಇನ್ನು ಕೆಲವೇ ನಿಮಿಷದಲ್ಲಿ ಎಫ್ಐಆರ್ ದಾಖಲು ಮಾಡಲಾಗುತ್ತದೆ. ಇದನ್ನು ತಪ್ಪಿಸಬೇಕಿದ್ದರೆ ಒಂದೂವರೆ ಲಕ್ಷ ರೂ. ನೀಡಬೇಕುʼ ಎಂದು ಬೆದರಿಸಿದ್ದ. ಯಾವ ದೂರು ಎಂದು ಕೇಳಿದರೂ ವಿವರಣೆ ನೀಡಿರಲಿಲ್ಲ.
ಹೆದರಿದ ಮಹಿಳಾ ಅಧಿಕಾರಿ ಲೋಕಾಯುಕ್ತ ಎಂದು ಕರೆ ಮಾಡಿದ್ದ ವ್ಯಕ್ತಿ ಸೂಚಿಸಿದ್ದ ಅಕೌಂಟ್ ನಂಬರ್ಗಳಿಗೆ ಒಂದು ಲಕ್ಷ ರೂ. ಹಣ ವರ್ಗಾಯಿಸಿದ್ದರು. ಬಳಿಕ ಪರಿಶೀಲಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಈ ಹಿನ್ನೆಲೆ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಪ್ರಾಣಿ, ಪಕ್ಷಿಗಳನ್ನು ಓಡಿಸುವುದಕ್ಕೂ ಸಿಗಲಿದೆ ಸಂಬಳ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಟೆಂಡರ್ ಆಹ್ವಾನ, ಹೇಗಿರುತ್ತೆ ಕೆಲಸ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422