ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021
ಲಕ್ಷಾಂತರ ಮೌಲ್ಯದ ಗಾಂಜಾ ಸಾಗಣೆ ಮಾಡುತಿದ್ದವರ ಮೇಲೆ ಭದ್ರಾವತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಮೂವರನ್ನು ಬಂಧಿಸಿದ್ದು, ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿಯ ಪೇಪರ್ ಟೌನ್ ಕಡೆಯಿಂದ ಕೂಲಿ ಬ್ಲಾಕ್ ಶೆಡ್ ಕಡೆಗೆ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 11.440 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 1.30 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಗಾಂಜಾ ಸಾಗಿಸುತ್ತಿದ್ದ ಡ್ಯಾನಿಯಲ್ ಅಲಿಯಾಸ್ ಡ್ಯಾನಿ, ಚರಣ ಅಲಿಯಾಸ್ ಕುರಚರಣ ರಾಜ್ ಯಾದವ್, ಆದಿಲ್ ಬಾಷಾ ಎಂಬುವವರನ್ನು ಬಂಧಿಸಲಾಗಿದೆ. 1.50 ಲಕ್ಷ ರೂ. ಮೌಲ್ಯದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಾಯಿಲ್ ಬಾಗ್ಲಾ, ಭದ್ರಾವತಿ ನಗರ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಸಿಬ್ಬಂದಿಗಳಾದ ವಂಕಟೇಶ್, ಮಂಜುನಾಥ್, ಅಶೋಕ್, ಸುನಿಲ್ ಕುಮಾರ್, ಪಾಲಾಕ್ಷನಾಯ್ಕ, ಮಲ್ಲಿಕಾರ್ಜುನ, ಕುಮಾರ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200