ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 2 JANUARY 2023
ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ
SHIMOGA : ಟಿವಿ ರೀಪೇರಿಗೆ ಕುಂಚೇನಹಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ನವೀನ್ ಅಲ್ಮೇಡ ಎಂಬುವವರಿಗೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಬೀರನಕೆರೆ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ನವೀನ್ ಅಲ್ಮೇಡ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೋಗ ನೋಡಿ ಹಿಂತಿರುಗುತ್ತಿದ್ದಾಗ ಅಪಘಾತ
SAGARA : ಜೋಗ ಜಲಪಾತ ನೋಡಿಕೊಂಡು ಕಾರ್ಗಲ್ ಮಾರ್ಗವಾಗಿ ಸಾಗರಕ್ಕೆ ತೆರಳುತ್ತಿದ್ದ ಬೈಕ್‌ಗೆ ಇಕೋ ವಾಹನ ಡಿಕ್ಕಿ ಹೊಡೆದು ಯುವಕ ಗಾಯಗೊಂಡಿದ್ದಾನೆ. ಆದಿತ್ಯ ಗಾಯಗೊಂಡಿರುವ ಬೈಕ್ ಸವಾರ. ಸಾಗರ ತಾಲೂಕು ಅಂಬುಗಳಲೆ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಆದಿತ್ಯನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹೊಸ ವರ್ಷದಂದು 750 ಮಕ್ಕಳಿಂದ ಪೋಷಕರಿಗೆ ಪಾದಪೂಜೆ, ಶಿವಮೊಗ್ಗದಲ್ಲಿ ವಿಭಿನ್ನ ಕಾರ್ಯಕ್ರಮ
ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ಸಾವು
KUMSI : ಬೈಕ್‌ಗೆ ಗ್ಯಾಸ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ. ಕುಂಸಿ ಸಮೀಪದ ಕಲ್ಲಾಪುರ ಗ್ರಾಮದ ಹನುಮಂತಪ್ಪ (32) ಮೃತರು. ಸಂಬಂಧಿಯೊಬ್ಬರನ್ನು ಗ್ರಾಮಕ್ಕೆ ಕರೆ ತರಲು ಬೈಕ್‌ನಲ್ಲಿ ಆಯನೂರಿಗೆ ಹೋಗುತ್ತಿದ್ದರು. ಆಯನೂರಿನಿಂದ ಹಾರನಹಳ್ಳಿ ಕಡೆಗೆ ಅತಿ ವೇಗವಾಗಿ ಬಂದ ಗ್ಯಾಸ್ ತುಂಬಿದ್ದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಹನುಮಂತಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






