SHIVAMOGGA LIVE | 2 JUNE 2023
SHIMOGA : ರಸ್ತೆಯಲ್ಲಿ ನಡೆದು ಹೋಗುವಾಗ ಬೈಕಿನಲ್ಲಿ ಬಂದು ಮೊಬೈಲ್ (Mobile Theft) ಕಸಿದು ಪರಾರಿಯಾದ ಪ್ರಕರಣ ಸಂಬಂಧ ಪೊಲೀಸರು ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ಅವರ ಬಳಿ 23 ಮೊಬೈಲ್ ಫೋನ್ಗಳು ಸಿಕ್ಕಿವೆ. ವಿವಿಧ ಠಾಣೆ ವ್ಯಾಪ್ತಿಯಲ್ಲಿ ಇವರು ಮೊಬೈಲ್ ಕಳ್ಳತನ ಮಾಡಿದ್ದು ಬೆಳಕಿಗೆ ಬಂದಿದೆ.
ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಮೊಬೈಲ್ ಫೋನಿನಲ್ಲಿ ಮಾತನಾಡಿಕೊಂಡು ನಡೆದು ಹೋಗುತ್ತಿದ್ದರು. ಬೈಕಿನಲ್ಲಿ ಬಂದ ಮೂವರು ಯುವಕರು ಮೊಬೈಲ್ ಫೋನನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತನಿಖೆ ನಡೆಸಿದ ಪೊಲೀಸರು ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ಇವರ ಬಳಿ 23 ಮೊಬೈಲ್ ಫೋನ್ಗಳು (Mobile Theft) ಪತ್ತೆಯಾಗಿವೆ. ಇವುಗಳ ಮೌಲ್ಯ 3.25 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಇವರ ವಿರುದ್ಧ ತುಂಗಾ ನಗರ, ದೊಡ್ಡಪೇಟೆ, ವಿನೋಬನಗರ ಠಾಣೆಗಳ ವ್ಯಾಪ್ತಿಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ಕೇಸ್ ದಾಖಲು, ನಡೆದು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಪರಾರಿಯಾದ ಕಳ್ಳರು
ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಲರಾಜ್ ಅವರ ಮುಂದಾಳತ್ವದಲ್ಲಿ ತುಂಗಾ ನಗರ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ತನಿಖಾ ತಂಡ ರಚಿಸಲಾಗಿತ್ತು. ಪಿಎಸ್ಐ ರಾಜುರೆಡ್ಡಿ, ಪಿಎಸ್ಐ ಕುಮಾರ್ ಕುರಗುಂದ, ಎಎಸ್ಐ ಮನೋಹರ್, ಸಿಬ್ಬಂದಿ ಹೆಚ್.ಸಿ ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್, ಸಿಪಿಸಿ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ