ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 27 NOVEMBER 2024
ಶಿವಮೊಗ್ಗ ಸಿಟಿ : ಪೊಲೀಸ್ ವಾಹನ ಕಂಡು ಬೈಕ್‌ಗಳ ಸಹಿತ ಪರಾರಿಯಾಗಲು ಯತ್ನಿಸಿದ್ದ ಮೂವರು ಯುವಕರನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳ್ಳತನ ಮಾಡಿದ್ದ ಬೈಕುಗಳ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸ್ ವಾಹನ ಕಂಡು ಹೆದರಿ ಪರಾರಿಯಾಗಿದ್ದಾಗಿ ಯುವಕರು ತಪ್ಪೊಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು ಸಮೀಪದ ಪುರಲೆ ಬೈಪಾಸ್ ಬಳಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬೆಳಗ್ಗೆ ಗಸ್ತು ತಿರುಗುತ್ತಿದ್ದರು. ಬೈಪಾಸ್ ಬಳಿ ಬರುತ್ತಿದ್ದಂತೆ ಮೂವರು ಯುವಕರು ತಮ್ಮ ಬೈಕುಗಳ ಸಹಿತ ಪರಾರಿಯಾಗಲು ಯತ್ನಿಸಿದ್ದಾರೆ. ಅನುಮಾನಗೊಂಡು ಯುವಕರನ್ನು ಹಿಡಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ » ಚನ್ನಪ್ಪ ಲೇಔಟ್‌ನಲ್ಲಿ ಬೆಳಗ್ಗೆ ಮನೆ ಹೊರ ಬಂದ ಯುವಕನಿಗೆ ಕಾದಿತ್ತು ಆಘಾತ
ಶಿಕಾರಿಪುರದಲ್ಲಿ ಕದ್ದ ಬೈಕುಗಳನ್ನು ಶಿವಮೊಗ್ಗದಲ್ಲಿ ಮಾರಾಟಕ್ಕೆ ಯತ್ನಿಸಿದ್ದಾಗಿ ಯುವಕರು ಬಾಯಿ ಬಿಟ್ಟಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಪಲ್ಸರ್ ಬೈಕ್ ಸೇರಿದಂತೆ ಎರಡು ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422