ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 FEBRUARY 2024
HOLEHONNURU : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.
ಆನವೇರಿ ಸಮೀಪದ ಮತ್ತಿಹಳ್ಳ ಸೇತುವೆ ಮೇಲಿಂದ ಲಾರಿ ಕೆಳಗೆ ಬಿದ್ದಿದೆ. ಎದುರಿನಿಂದ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಲಾರಿ ಚಾಲಕ ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಸೇತುವೆಯಿಂದ ಹಳ್ಳಕ್ಕೆ ಉರುಳಿದೆ ಎನ್ನಲಾಗಿದೆ. ಬಿದ್ದ ರಭಸಕ್ಕೆ ಚಕ್ರಗಳು ಕಳಚಿಕೊಂಡು, ಲಾರಿ ಜಖಂ ಆಗಿದೆ.
ಎರಡು ಕ್ರೇನ್ಗಳನ್ನು ಬಳಸಿ ಭಾನುವಾರ ಲಾರಿಯನ್ನು ಮೇಲೆತ್ತಲಾಯಿತು. ಕಾರ್ಯಾಚರಣೆಯನ್ನು ವೀಕ್ಷಿಸಲು ಈ ಭಾಗದಲ್ಲಿ ದೊಡ್ಡ ಸಂಖ್ಯೆಯ ಜನ ಸೇರಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್ ಏರಿಯಾ ಡಾಮಿನೇಷನ್ ಗಸ್ತು, 33 ಕೇಸ್ ದಾಖಲು, ಎಲ್ಲೆಲ್ಲಿ ನಡೆಯಿತು ಗಸ್ತು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422