ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 MAY 2024
SAGARA : ಟೂರಿಸ್ಟ್ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜೋಗ ಜಲಪಾತ ವೀಕ್ಷಣೆ ಮಾಡಿ ಹೊನ್ನಾವರಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.
ಗೇರುಸೊಪ್ಪ – ಹೊನ್ನಾವರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗೌರಿಬಿದನೂರಿನಿಂದ ಎರಡು ಬಸ್ಸುಗಳಲ್ಲಿ ಪ್ರವಾಸಿಗರು ವಿವಿಧ ಪ್ರವಾಸಿ ತಾಣಕ್ಕೆ ತೆರಳುತ್ತಿದ್ದರು. ಇವತ್ತು ಜೋಗ ಜಲಪಾತಕ್ಕೆ ಭೇಟಿ ನೀಡಿ, ಅಲ್ಲಿಂದ ತೆರಳುವಾಗ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ.
ಬಸ್ಸಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಅರಸಾಳು ಬಳಿ ಕಾಡಾನೆ ದಾಳಿ, ವ್ಯಕ್ತಿ ಸಾವು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು
LATEST NEWS
- ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

- ಸಿಗಂದೂರು ಲಾಂಚ್ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

- ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















