ಉಡುತಡಿಯಲ್ಲಿ ಕಲ್ಯಾಣಿಗೆ ಜಾರಿ ಬಿದ್ದು ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIKARIPURA, 25 AUGUST 2024 : ಸ್ನೇಹಿತರೊಂದಿಗೆ ಪ್ರವಾಸಕ್ಕೆ (Tourist) ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ಉಡುತಡಿ ಗ್ರಾಮದ ಅಕ್ಕಮಹಾದೇವಿ ಜನ್ಮಸ್ಥಳದ ಪ್ರವಾಸಿ ತಾಣದಲ್ಲಿ ಘಟನೆ ಸಂಭವಿಸಿದೆ.

ಶಿರಾಳಕೊಪ್ಪದ ಗಂಡಗಡಕೇರಿ ನಿವಾಸಿ ತಾಹೀರ್‌ (21) ಮೃತ ದುರ್ದೈವಿ. ತಾಹೀರ್‌ ಇವತ್ತು ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಆಗಮಿಸಿದ್ದ. ಫೋಟೊ ತೆಗೆಯುವ ವೇಳೆ ಕಾಲು ಜಾರಿ ಕಲ್ಯಾಣಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೆ ಆತನ ರಕ್ಷಣಾ ಕಾರ್ಯ ನಡೆಸಲಾಯಿತು. ಅಷ್ಟರಲ್ಲಿ ತಾಹೀರ್‌ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಶಿರಾಳಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

youth-at-udutadi-shikaripura-Shiralakoppa

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಮಳೆಗೆ ಮನೆ ಗೋಡೆ ಕುಸಿತ, ಅದೃಷ್ಟವಶಾತ್‌ ತಪ್ಪಿದ ಅನಾಹುತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2024

Leave a Comment