ಎರಡು ಪ್ರತ್ಯೇಕ ಅಪಘಾತ, ಶಿವಮೊಗ್ಗ ತಾಲೂಕಿನಲ್ಲಿ ಇಬ್ಬರು ಸಾವು, ಹೇಗಾಯ್ತು ಘಟನೆಗಳು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021

ಪ್ರತ್ಯೇಕ ಎರಡು ಘಟನೆಗಳಲ್ಲಿ ಟ್ರಾಕ್ಟರ್ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಎರಡು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ 1 : ಟ್ರಾಕ್ಟರ್ ಪಲ್ಟಿಯಾಗಿ ಸಾವು

ಜಮೀನು ಉಳುಮೆ ಮಾಡುವಾಗ ಟ್ರಾಕ್ಟರ್ ಪಲ್ಟಿಯಾಗಿದೆ. ಚಾಲಕ ಕೆಂಚಪ್ಪ (48) ಮೈ,ಕೈಗೆ ಗಂಭೀರ ಗಾಯವಾಗಿದ್ದು, ಮೃತಪಟ್ಟಿದ್ದಾರೆ. ಸಿದ್ಲಿಪುರದ ಕೆಂಚಪ್ಪ ಅವರು ಇಲ್ಲಿನ ಮಂಜಪ್ಪ ಎಂಬುವವರ ಜಮೀನಿನಲ್ಲಿ ಉಳುಮೆ ಮಾಡುವಾಗ ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

204751962 1143709169442325 1917981465831900986 n.jpg? nc cat=110&ccb=1 3& nc sid=8bfeb9& nc ohc=Bb82T29 yhsAX9kexyr& nc ht=scontent.fblr20 1

ಘಟನೆ 2 : ಟ್ರಾಕ್ಟರ್ ಮೇಲಿಂದ ಬಿದ್ದು ಸಾವು

ಟ್ರಾಕ್ಟರ್ ಮಡ್‍ ಗಾರ್ಡ್‍ ಮೇಲೆ ಕೂತಿದ್ದ ವ್ಯಕ್ತಿಯೊಬ್ಬರು ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ರಾಗಿಹೊಸಹಳ್ಳಿಗೆ ಹೋಗುವ ಮಾರ್ಗದಲ್ಲಿ ಘಟನೆ ಸಂಭವಿಸಿದೆ. ಮಡ್‍ ಗಾರ್ಡ್‍ ಮೇಲೆ ಕೂತಿದ್ದ ಶಾಂತಪ್ಪ  ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಂಸಿ ಠಾಣೆಯಲ್ಲಿ ಚಾಲಕ ಪವನ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment